Girl in a jacket

ಮೇ. 07 ರಂದು ಮತ ಚಲಾಯಿಸಲು ವೇತನ ಸಹಿತ ರಜೆ

ಸುದ್ದಿಲೈವ್/ಶಿವಮೊಗ್ಗ

ಭಾರತ ಚುನಾವಣಾ ಆಯೋಗವು ಕರ್ನಾಟಕದಲ್ಲಿ 02 ಹಂತಗಳಲ್ಲಿ ಲೋಕಸಭಾ ಚುನಾವಣೆಯನ್ನು ಘೋಷಿಸಿದ್ದು, ಶಿವಮೊಗ್ಗ ಜಿಲ್ಲಾದ್ಯಂತ ಮೇ 07 ಮತದಾನದ ದಿನದಂದು ರಾಜ್ಯಾದ್ಯಂತ ಎಲ್ಲಾ ಕಾರ್ಖಾನೆಗಳು, ಅಂಗಡಿಗಳು, ವಾಣಿಜ್ಯ ಸಂಸ್ಥೆಗಳು ಮತ್ತು ಇತರೆ ಸಂಸ್ಥೆಗಳಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ವೇತನ ಸಹಿತ ರಜೆ ಘೋಷಿಸಲಾಗಿದೆ.

ಸಂವಿಧಾನಾತ್ಮಕ ಹಕ್ಕಾದ ಮತವನ್ನು ಚಲಾಯಿಸುವುದಕ್ಕಾಗಿ ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಮಾಲೀಕರು/ನಿಯೋಜಕರು ಕಾರ್ಮಿಕರಿಗೆ ಮತದಾನದಲ್ಲಿ ಪಾಲ್ಗೊಳ್ಳಲು ವೇತನ ಸಹಿತ ರಜೆ ನೀಡುವಂತೆ ಹಾಗೂ ವೇತನ ಸಹಿತ ರಜೆ ಆದೇಶ ಉಲ್ಲಂಘಿಸಿದ ಸಂಸ್ಥೆ ಹಾಗೂ ನಿಯೋಜಕರ ವಿರುದ್ಧ ನಿಯಮಾನುಸಾರ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಕಾರ್ಮಿಕ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ-https://suddilive.in/archives/13903

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು