ಶಿವಮೊಗ್ಗ/ಮೈಸೂರು
ನೈರುತ್ಯ ಪದವೀಧರರ ಕ್ಷೇತ್ರಕ್ಕೆ ನಾಮ ಪತ್ರ ಸಲ್ಲಿಸಲು ಕೊನೆಯ ದಿನವಾದ ಇಂದು (ಮೇ 16) ಪಕ್ಷೇತರ ಅಭ್ಯರ್ಥಿಯಾಗಿ ನ್ಯಾಯವಾದಿ ಷಡಾಕ್ಷರಪ್ಪ ಜಿ.ಆರ್. ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಪತ್ರಕರ್ತ ಎಂ.ಅಣ್ಣಪ್ಪ ಇದ್ದರು.
ಅದರಂತೆ ಬಿಜೆಪಿ ಬಂಡಾಯವಾಗಿ ಮಾಜಿ ಶಾಸಕ ರಘುಪತಿ ಭಟ್ಟರು ಉಮೇದುವಾರಿಕೆಯನ್ನ ಸಲ್ಲಿಸಿದ್ದಾರೆ. ರಘುಪತಿ ಭಟ್ಟರು ನೈರುತ್ಯ ಪದವೀಧರ ಕ್ಷೇತ್ರಕ್ಕೆ ಸ್ಪರ್ಧಿಸುತ್ತಿರುವುದಾಗಿ ತಿಳಿದುಬಂದಿದೆ.
ಮೂರು ಬಾರಿ ಶಾಸಕನಾಗಿದ್ದ ತಮಗೆ ಪಕ್ಷದಲ್ಲಿ ಸಿಗಬೇಕಾಗಿದ್ದ ಮನ್ನಣೆ ಗೌರವ ಸಿಕ್ತಿಲ್ಲ. ಆದ್ದರಿಂದ ತಾನು ವಿಧಾನ ಪರಿಷತ್ತಿನ ನೈರುತ್ಯ ಪದವೀಧರರ ಕ್ಷೇತ್ರಕ್ಕೆ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿಯೇ ಸಿದ್ಧ ಎಂದು ಮಾಜಿ ಶಾಸಕ ಕೆ.ರಘುಪತಿ ಭಟ್ ಅವರು ಹೇಳಿದ್ದಾರೆ.
ಇದನ್ನೂ ಓದಿ-https://suddilive.in/archives/14884
Tags:
ಸ್ಥಳೀಯ ಸುದ್ದಿಗಳು