Girl in a jacket

ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಗಳ ಬಂಧನ

ಸುದ್ದಿಲೈವ್/ಶಿವಮೊಗ್ಗ

ಮಾದಕ ವಸ್ತು ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನ ಸೀಎನ್ ಪೊಲೀಸರು ಬಂಧಿಸಿದ್ದಾರೆ. ಆರೋಪಿತರಿಂದ 75 ಸಾವಿರ ರೂ. ಮೌಲ್ಯದ 716 ಗ್ರಾಂ ಗಾಂಜಾವನ್ನ ವಶಪಡಿಸಿಕೊಳ್ಳಲಾಗಿದೆ.

ನಗರದ ಅನುಪಿನಕಟ್ಟೆ ಗ್ರಾಮದಲ್ಲಿ ಇಬ್ಬರು ವ್ಯಕ್ತಿಗಳು ಮಾದಕ ವಸ್ತು ಗಾಂಜಾವನ್ನು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಮೇರೆಗೆ ಸೆನ್ ಪೊಲೀಸರು ದಾಳಿ ನಡೆಸಿದ್ದಾರೆ.

ಮಿಥುನ್ ಕುಮಾರ್ ಜಿ ಕೆ, ಐಪಿಎಸ್ ಮಾನ್ಯ ಪೊಲೀಸ್ ಅಧೀಕ್ಷಕರು, ಶಿವಮೊಗ್ಗ ಜಿಲ್ಲೆ ಮತ್ತು ಕಾರಿಯಪ್ಪ ಎ ಜಿ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2, ಶಿವಮೊಗ್ಗ ಜಿಲ್ಲೆ ರವರ ಮಾರ್ಗದರ್ಶನದಲ್ಲಿ  ತಿಪ್ಪೇಸ್ವಾಮಿ ಪೊಲೀಸ್ ನಿರೀಕ್ಷಕರು ಸಿ.ಇ.ಎನ್ ಕ್ರೈಂ ಪೊಲೀಸ್ ಠಾಣೆರವರ ನೇತೃತ್ವದ ಸಿಬ್ಬಂದಿಗಳನ್ನೊಳಗೊಂಡ ತಂಡವು ಸ್ಥಳಕ್ಕೆ ಹೋಗಿ ದಾಳಿ ನಡೆಸಿದ್ದಾರೆ.

ಗಾಂಜಾ ಮಾರಾಟ ಮಾಡುತ್ತಿದ್ದ 1) ಮೋಹನ (29), ಮತ್ತು 2) ಮಿಥುನ್ 19 ವರ್ಷ  ಇವರನ್ನು ವಶಕ್ಕೆ ಪಡೆಯಲಾಗಿದೆ. ಅಂದಾಜು ಮೌಲ್ಯ 75,000/- ರೂ ಗಳ ಒಟ್ಟು 715 ಗ್ರಾಂ ತೂಕದ ಒಣ ಗಾಂಜಾವನ್ನು ಅಮಾನತುಪಡಿಸಿಕೊಳ್ಳಲಾಗಿದೆ, ಆರೋಪಿತರ ವಿರುದ್ಧ ಸಿ.ಇ.ಎನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ತೆಗೊಳಲಾಗಿದೆ.

ಇದನ್ನೂ ಓದಿ-https://suddilive.in/archives/14803

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು