Girl in a jacket

ಬಿಜೆಪಿ ಪ್ರತಿಭಟನೆ

ಸುದ್ದಿಲೈವ್/ಶಿವಮೊಗ್ಗ

ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಚಂದ್ರಶೇಖರನ್ ಆತ್ಮಹತ್ಯೆ ಹಿನ್ನೆಲೆಯಲ್ಲಿ ಶಿವಮೊಗ್ಗದಲ್ಲಿ ಬಿಜೆಪಿ ಪ್ರತಿಭಟನೆ ನಡೆಸಿದೆ. ನಗರದ ಶಿವಪ್ಪ ನಾಯಕ ಪ್ರತಿಮೆ ಬಳಿ ಪ್ರತಿಭಟಿಸಲಾಗಿದೆ.

ವಾಲ್ಮೀಕಿ ನಿಗಮದ 187 ಕೋಟಿ ವ್ಯವಹಾರ ನಡೆದಿದ್ದು 85 ಕೋಟಿ ಹಗರಣವನ್ನ ಬಿಚ್ಚಿಟ್ಟು ನೇಣಿಗೆ ಶರಣಾಗಿದ್ದಾರೆಂದು ಆರೋಪಿಸಿರುವ ಬಿಜೆಪಿ ರಾಜ್ಯ ಕಾಂಗ್ರೆಸ್ ಸರ್ಕಾರದ ವೈಫಲ್ಯತೆ ಎಂದು ದೂರಿದೆ.

ಪ್ರತಿಭಟನೆಯಲ್ಲಿ ಮಾಜಿ ಸಚಿವ ಶ್ರೀನಿವಾಸ್ ಪೂಜಾರಿ ಸೇರಿದಂತೆ ಹಲವು ನಾಯಕರು ಭಾಗಿಯಾಗಿದ್ದಾರೆ. ಖಜಾನೆ ಕೊಳ್ಳೆ ಹೊಡೆಯುತ್ತಿರುವ ಸಚಿವ ನಾಗೇಂದ್ರ ರಾಜಿನಾಮೆಗೆ ಒತ್ತಾಯಿಸಲಾಗಿದೆ. ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ

ಶಾಸಕ ಚೆನ್ನಬಸಪ್ಪ, ಜಗದೀಶ್, ಎನ್ ಜೆ ನಾಗರಾಜ್, ದತ್ತಾತ್ರಿ, ಗಿರೀಶ್ ಪಟೇಲ್, ಹರೀಶ್ ಕೃಷ್ಣ ಮೊದಲಾದವರು ಉಪಸ್ಥಿತರಿದ್ದರು.

ಇದನ್ನೂ ಓದಿ-https://suddilive.in/archives/15712

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
close