ಸುದ್ದಿಲೈವ್/ತೀರ್ಥಹಳ್ಳಿ
ಹಾಸನದ ಪ್ರಜ್ವಲ್ ರೇವಣ್ಣನವರ ಪೆನ್‌ಡ್ರೈವ್ ಪ್ರಕರಣದ ಹಿಂದೆ ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಹೆಸರು ಕೇಳಿ ಬಂದಿದೆ. ಈ ಹಿನ್ನೆಲೆ ರಾಜ್ಯ ಸರ್ಕಾರದ ಎಸ್‌ಐಟಿ ತನಿಖೆ ಬದಲು ಸಿಬಿಐ ತನಿಖೆಗೆ ವಹಿಸಬೇಕು ಎಂದು ಆಗ್ರಹಿಸಿ ತೀರ್ಥಹಳ್ಳಿ ತಾಲೂಕು ಜೆಡಿಎಸ್ ವತಿಯಿಂದ ಪ್ರತಿಭಟನೆ ಮೂಲಕ ಆಗ್ರಹಿಸಿಲಾಯಿತು.
ಸೋಮವಾರ ತಾಲೂಕು ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದ ಜೆಡಿಎಸ್ ಕಾರ್ಯಕರ್ತರು, ಪೆನ್ ಡ್ರೈವ್ ವಿಚಾರದಲ್ಲಿ ಜೆಡಿಎಸ್ ಪಕ್ಷದ ನಾಯಕರ ವಿರುದ್ಧ ಅಪವಾದ ಹೊರಿಸಿ ಪಕ್ಷವನ್ನು ದರ್ಬಲಗೊಳಿಸುವ ಪ್ರಯತ್ನ ಮಾಡಲಾಗುತ್ತಿದೆ. ಪ್ರಕರಣದ ತನಿಖೆ ಮೇಲೆ ಪ್ರಭಾವ ಬೀರುತ್ತಿರುವ ಡಿ.ಕೆ.ಶಿವಕುಮಾರ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ದೇವೇಗೌಡ ಮತ್ತು ಕುಮಾರಸ್ವಾಮಿ ಅವರ ಜೊತೆಗೆ ಲಕ್ಷಾಂತರ ಕಾರ್ಯಕರ್ತರು ಇದ್ದಾರೆ. ಪಕ್ಷಕ್ಕೆ ಕಳಂಕ ತರುವ ಪ್ರಯತ್ನ ಸಫಲವಾಗುವುದಿಲ್ಲ ಎಂದು ಜೆಡಿಎಸ್ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು
ಜೆಡಿಎಸ್ ತಾಲೂಕು ಅಧ್ಯಕ್ಷ ಕುಣಜೆ ಕಿರಣ್, ಸೇರಿದಂತೆ ಹಲವರು ಮನವಿ ನೀಡುವ ವೇಳೆ ಉಪಸ್ಥಿತರಿದ್ದರು.
ಇದನ್ನೂ ಓದಿ-https://suddilive.in/archives/14727