Girl in a jacket

ಡಾ.ಧನಂಜಯ ಸರ್ಜಿ ಅವರಿಂದ ಮತಯಾಚನೆ

ಸುದ್ದಿಲೈವ್/ಶಿವಮೊಗ್ಗ

ನೈರುತ್ಯ ಪದವೀಧರ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಡಾ.ಧನಂಜಯ ಸರ್ಜಿ ಅವರಿಂದ ಇಂದು ಮತಯಾಚನೆ ನಡೆಸಿದರು.

ನೈರುತ್ಯ ಪದವೀಧರ ಚುನಾವಣೆಯ ಹಿನ್ನೆಲೆಯಲ್ಲಿ ಮಂಗಳವಾರ ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ ಧನಂಜಯ ಸರ್ಜಿ ಅವರು ಮಾಜಿ ನ್ಯಾಯಾಧೀಶರು ಹಾಗೂ ಸಾಮಾಜಿಕ ನ್ಯಾಯ ಸಮಿತಿಯ ಮಾಜಿ ಜಿಲ್ಲಾಧ್ಯಕ್ಷರಾದ ವೀರಭದ್ರಪ್ಪ ಪೂಜಾರಿ ಅವರು ಮತ್ತು ವಕೀಲರನ್ನು ವಿನೋಬನಗರದ ಅವರ ನಿವಾಸದಲ್ಲಿ ಭೇಟಿ ಮಾಡಿ ತಮ್ಮನ್ನು ಬೆಂಬಲಿಸುವಂತೆ ವಿನಂತಿಸಿದರು.,

ಈ ಸಂದರ್ಭದಲ್ಲಿ ವಿಧಾನಪರಿಷತ್ ಸದಸ್ಯರಾದ ಡಿ.ಎಸ್. ಅರುಣ್, ಜಿಲ್ಲಾ ಬಿಜೆಪಿ ಖಂಜಾಂಚಿ ಎನ್. ಡಿ. ಸತೀಶ್, ನಗರ ಅಧ್ಯಕ್ಷ ಮೋಹನ ರೆಡ್ಡಿ, ಸೋಮಶೇಖರ್ ವಿ. ಶೇಟ್ ಸೇರಿದಂತೆ ಹಲವರು ಹಾಜರಿದ್ದರು.

ಇದನ್ನೂ ಓದಿ-https://suddilive.in/archives/15194

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು