Girl in a jacket

ಕೃಷಿ ಹೊಂಡಕ್ಕೆ ಮತ್ತೋರ್ವ ಬಾಲಕ ಬಲಿ

ಸುದ್ದಿಲೈವ್/ಸೊರಬ

ಜಾನುವಾರು ಮೇಯಿಸಲು ತೆರಳಿದ ಬಾಲಕನೋರ್ವ ಕೃಷಿ ಹೊಂಡದಲ್ಲಿ ಮುಳುಗಿ ಮೃತಪಟ್ಟ ಘಟನೆ ತಾಲೂಕಿನ ಕ್ಯಾಸನೂರು _ ತಲಕಾಲಕೊಪ್ಪ ಗ್ರಾಮದಲ್ಲಿ ಸೋಮವಾರ ನಡೆದಿದೆ.

ಗ್ರಾಮದ ಸಾತ್ವಿಕ್(14) ಮೃತ ದುರ್ದೈವಿ. ಗ್ರಾಮದ ಸುರೇಶ್ ಎಂಬುವರ ಪುತ್ರ ಸಾತ್ವಿಕ್ ಶಾಲೆ ರಜೆ ಇರುವ ಹಿನ್ನೆಲೆ ಜಾನುವಾರು ಮೇಯಿಸಲು ತೆರಳಿದಾಗ ಗ್ರಾಮದ ಫಾತೀಮ ಎಂಬುವರ ಕೃಷಿ ಹೊಂಡಕ್ಕೆ ಆಕಸ್ಮಿಕವಾಗಿ ಕಾಲುಜಾರಿ ಬಿದ್ದು ಮೃತಪಟ್ಟಿದ್ದಾನೆ.

ಮಗನ ಸಾವಿಗೆ ಪೋಷಕರ ಆಕ್ರಂದನ ಮುಗಿಲು ಮುಟ್ಟಿತ್ತು. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬಾಲಕನ ಶವ ಮೇಲೆತ್ತಿದ್ದಾರೆ. ಸೊರಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇನ್ನೂ ಐದುದಿನಗಳ ಮುಂಚೆ ಕುಂಸಿ ಪೊಲೀಸ್ ಠಾಣ ವ್ಯಾಪ್ತಿಯ ಚೆನ್ನಳ್ಳಿ ಗ್ರಾಮದಲ್ಲಿ ಕೃಷಿ ಹೊಂಡಕ್ಕೆ ಬಿದ್ದು 28 ವರ್ಷದ ಯುವಕ ಹಾಗೂ ಬಾಲಕನೋರ್ವ ಬಿದ್ದು ಸಾವನ್ನಪ್ಪಿದ್ದರು. ಈ ಪ್ರಕರಣ ಮರೆಯಾಗುವ ಮುನ್ನ ಮತ್ತೋರ್ವ ಬಲಿಯಾಗಿರುವುದು ದುರಂತ

ಇದನ್ನೂ ಓದಿ-https://suddilive.in/archives/15592

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು