Girl in a jacket

ಕಾಂಗ್ರೆಸ್ ಸರ್ಕಾರಕ್ಕೆ ಒಂದು ವರ್ಷ ಪೂರ್ಣ, ದೇವರಿಗೆ ವಿಶೇಷ ಪೂಜೆ

ಸುದ್ದಿಲೈವ್/ಶಿವಮೊಗ್ಗ

ಕಾಂಗ್ರೆಸ್ ಸರ್ಕಾರ ಒಂದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಶಿವಮೊಗ್ಗದಲ್ಲಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ದೇವರಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು.

ಶಿವಮೊಗ್ಗ ನಗರದ ವೀರಶೈವ ಕಲ್ಯಾಣ ಮಂದಿರದ ಸಮೀಪ ಇರುವ ವಿಶ್ವನಾಥ ದೇವಾಲಯದಲ್ಲಿ ರುದ್ರಾಭಿಷೇಕ ಹಾಗೂ ವಿಶೇಷ ಪೂಜೆ ಸಲ್ಲಿಸಲಾಗಿದೆ. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರ ಫೋಟೋ ಹಿಡಿದು ಪೂಜೆ ಸಲ್ಲಿಸಲಾಗಿದೆ.

ಇನ್ನೂ ನಾಲ್ಕು ವರ್ಷಗಳ ಕಾಲ ಸರ್ಕಾರ ಸುಭದ್ರ ವಾಗಿರುವಂತೆ ಕಾರ್ಯಕರ್ತರು ಪ್ರಾರ್ಥನೆ ಸಲ್ಲಿಸಿದರು.‌

ಈ ಸಂದರ್ಭದಲ್ಲಿ ಯುವ ಮುಖಂಡರಾದ ಕೆ ರಂಗನಾಥ್, ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹೆಚ್‌.ಪಿ. ಗಿರೀಶ್, ಪಂಚ ಗ್ಯಾರೆಂಟಿ ಅನುಷ್ಠಾನ ಪ್ರಾಧಿಕಾರದ ಸದಸ್ಯ ಎಸ್ ಕುಮಾರೇಶ್, ಯುವ ಕಾಂಗ್ರೆಸ್ ಪ್ರಮುಖರಾದ ಕೆ ಎಲ್ ಪವನ್, ಗುರುಪ್ರಸಾದ್, ಧರ್ಮ ಬೊಮ್ಮನಕಟ್ಟೆ, ವಸಂತ, ಸುಹಾಸ್ ಗೌಡ, ರಾಹುಲ್ ಸಿಗೆಹಟ್ಟಿ, ರಾಜೇಶ್ ಮಂದಾರ, ವಿನಯ್, ಕಾರ್ತಿಕ್ ,ಪ್ರಶಾಂತ್, ಜ್ಞಾನ ಶೇಖರ್ ಹಾಗೂ ಯುವ ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿರಿದ್ದರು.

ಇದನ್ನೂ ಓದಿ-https://suddilive.in/archives/15066

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು