Girl in a jacket

ಡಾ.ಸರ್ಜಿ, ಬೋಜೇಗೌಡರಿಂದ ಬಿರುಸಿನ‌ ಮತಯಾಚನೆ

ಸುದ್ದಿಲೈವ್/ಮಂಗಳೂರು

ವಿಧಾನ ಪರಿಷತ್ ನೈರುತ್ಯ ಪದವೀಧರರ ಕ್ಷೇತ್ರ ಮತ್ತು ನೈರುತ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯ ಬಿರುಸಿನ ಮತಯಾಚನೆ ಚುರುಕಾಗಿದೆ.

ಈ ಹಿನ್ನೆಲೆಯಲ್ಲಿ ಸೋಮವಾರ ಮಂಗಳೂರಿನ ಪ್ರತಿಷ್ಠಿತ ವಿದ್ಯಾ ಸಂಸ್ಥೆಯಾದ ಶಕ್ತಿ ಎಜುಕೇಷನಲ್ ಟ್ರಸ್ಟ್ ಗೆ ನೈರುತ್ಯ ಪದವೀಧರರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ ಧನಂಜಯ ಸರ್ಜಿ ಮತ್ತು ನೈರುತ್ಯ ಶಿಕ್ಷಕರ ಕ್ಷೆತ್ರದ ಎನ್ ಡಿ ಎ ಅಭ್ಯರ್ಥಿ ಎಸ್. ಎಲ್. ಭೋಜೇಗೌಡರು ಶಕ್ತಿ ವಿದ್ಯಾ ಸಂಸ್ಥೆಗೆ ಭೇಟಿ ನೀಡಿದ್ದಾರೆ.

ಆಡಳಿತವರ್ಗ , ಉಪನ್ಯಾಸಕರು, ಸಿಬ್ಬಂದಿವರ್ಗದವರನ್ನು ಭೇಟಿ ಮಾಡಿ ವಿಧಾನ ಪರಿಷತ್ ಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿಗಳನ್ನು ಬೆಂಬಲಿಸಿ, ಅತಿ ಹೆಚ್ಚಿನ ಮತಗಳಿಂದ ಗೆಲ್ಲಿಸುವಂತೆ ಮತಯಾಚಿಸಿದರು.

ಈ ವೇಳೆ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಸತೀಶ್ ಕುಂಪಲ, ಮಾಜಿ ವಿಧಾನ ಪರಿಷತ್ ಸದಸ್ಯರಾದ ಕ್ಯಾಪ್ಟನ್ ಗಣೇಶ್ ಕಾರ್ಣಿಕ್, ಶಕ್ತಿ ವಿದ್ಯಾ ಸಂಸ್ಥೆಯ ಅಧ್ಯಕ್ಷರಾದ ಡಾ. ಕೆ. ಸಿ. ನಾಯ್ಕ್ , ಆಡಳಿತಾಧಿಕಾರಿ ರಮೇಶ್, ದಕ್ಷಿಣ ಕನ್ನಡ ಲೋಕಸಭಾ ಅಭ್ಯರ್ಥಿ ಕ್ಯಾಪ್ಟನ್ ಬ್ರೀಜೇಶ್ ಚೌಟ,

ರಾಜ್ಯ ಬಿಜೆಪಿ ಕಾರ್ಯದರ್ಶಿ ಮತ್ತು ವಿಧಾನ ಪರಿಷತ್ ಸದಸ್ಯರಾದ ಡಿ. ಎಸ್. ಅರುಣ್, ರಾಜ್ಯ ಪ್ರಕೋಷ್ಟಗಳ ಸಂಯೋಜಕರಾದ ಎಸ್. ದತ್ತಾತ್ರಿ, ಮಾಜಿ ಮೇಯರ್ ಪ್ರೇಮಾನಂದ್, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಶ್ರೀಮತಿ ಮಂಜುಳಾ, ಜಿಲ್ಲಾ ಓ ಬಿ ಸಿ ಮೋರ್ಚಾ ಅಧ್ಯಕ್ಷರಾದ ಮಹೇಶ್ ಜೋಗಿ , ಶಿವಮೊಗ್ಗ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ.ಎಚ್.ಮಾಲತೇಶ್,

ಯುವ ಜನತಾದಳದ ಅಧ್ಯಕ್ಷರಾದ ಅಕ್ಷಿತ್ ಸುವರ್ಣ, ವಿದ್ಯಾಸಂಸ್ಥೆಯ ಆಡಳಿತ ವರ್ಗ, ಸಿಬ್ಬಂದಿ ವರ್ಗ, ಸ್ಥಳೀಯ ಬಿಜೆಪಿ ಮುಖಂಡರು ಉಪಸ್ಥಿತರಿದ್ದರು.

ಇದನ್ನೂ ಓದಿ-https://suddilive.in/archives/15566

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು