ಸುದ್ದಿಲೈವ್/ಶಿವಮೊಗ್ಗ
ಕರ್ನಾಟಕ ನೈರುತ್ಯ ಶಿಕ್ಷಕರ ಕ್ಷೇತ್ರ ಹಾಗೂ ನೈರುತ್ಯ ಪದವೀಧರರ ಚುನಾವಣಾ ಕ್ಷೇತ್ರಗಳಿಂದ ಕರ್ನಾಟಕ ವಿಧಾನಪರಿಷತ್ತಿಗೆ ನಡೆಯಲಿರುವ ಚುನಾವಣೆಗೆ ಭಾರತ ಚುನಾವಣಾ ಆಯೋಗವು ಐ.ಎ.ಎಸ್ ಅಧಿಕಾರಿಗಳನ್ನು ಚುನಾವಣಾ ವೀಕ್ಷಕರನ್ನಾಗಿ ನೇಮಕಮಾಡಿದೆ.
ಕರ್ನಾಟಕ ನೈರುತ್ಯ ಪದವೀಧರರ ಕ್ಷೇತ್ರ ಕೊಡಗು ಜಿಲ್ಲೆ, ಚಿಕ್ಕಮಗಳೂರು ಜಿಲ್ಲೆ, ದಕ್ಷಿಣ ಕನ್ನಡ ಜಿಲ್ಲೆ, ಉಡುಪಿ ಜಿಲ್ಲೆ, ಶಿವಮೊಗ್ಗ ಜಿಲ್ಲೆ, ದಾವಣಗೆರೆ ಜಿಲ್ಲೆ ಗಳಿಗೆ ಐ.ಎ.ಎಸ್ ಅಧಿಕಾರಿಯಾದ ಅನಿಲ್ ಕುಮಾರ್ ಅವರನ್ನು ಚುನಾವಣಾ ವೀಕ್ಷಕರನ್ನಾಗಿ ನೇಮಕ ಮಾಡಲಾಗಿದೆ. ಸಹಾಯಕ ಅಧಿಕಾರಿಯಾಗಿ ಮೈಸೂರು ಜಿಲ್ಲೆಯ ತೋಟಗಾರಿಕ ಇಲಾಖೆಯ ಉಪ ನಿರ್ದೇಶಕರಾದ ರುದ್ರೇಶ್ . ಕೆ ನೇಮಕ ಮಾಡಲಾಗಿದೆ. 72044064565 ಮತ್ತು 9964174107 ದೂರವಾಣಿ ಸಂಖ್ಯೆಗೆ ಸಂಪರ್ಕಿಸಬಹುದಾಗಿದೆ..
ಕರ್ನಾಟಕ ನೈರುತ್ಯ ಶಿಕ್ಷಕರ ಕ್ಷೇತ್ರಗಳಾದ ಕೊಡಗು ಜಿಲ್ಲೆ, ಚಿಕ್ಕಮಗಳೂರು ಜಿಲ್ಲೆ, ದಕ್ಷಿಣ ಕನ್ನಡ ಜಿಲ್ಲೆ, ಉಡುಪಿ ಜಿಲ್ಲೆ, ಶಿವಮೊಗ್ಗ ಜಿಲ್ಲೆ, ದಾವಣಗೆರೆ ಜಿಲ್ಲೆ ಗಳಿಗೆ ಐ.ಎ.ಎಸ್ ಅಧಿಕಾರಿಯಾದ ಹರ್ಷ ಗುಪ್ತ ಅವರನ್ನು ಚುನಾವಣಾ ವೀಕ್ಷಕರನ್ನಾಗಿ ನೇಮಕ ಮಾಡಲಾಗಿದೆ. ಸಹಾಯಕ ಅಧಿಕಾರಿಯಾಗಿ ಮೈಸೂರು ಕನ್ನಡ ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಡಾ. ಎಂ.ಡಿ. ಸುದರ್ಶನ್ ನೇಮಕ ಮಾಡಲಾಗಿದೆ. 7204294565 ಮತ್ತು 9448244340 ದೂರವಾಣಿ ಸಂಖ್ಯೆಗೆ ಸಂಪರ್ಕಿಸಿ.
ಕರ್ನಾಟಕ ದಕ್ಷಿಣ ಶಿಕ್ಷಕರ ಕ್ಷೇತ್ರಗಳಾದ ಮೈಸೂರು ಜಿಲ್ಲೆ, ಮಂಡ್ಯ ಜಿಲ್ಲೆ, ಚಾಮರಾಜನಗರ ಜಿಲ್ಲೆ, ಹಾಸನ ಜಿಲ್ಲೆಗಳಿಗೆ ಐ.ಎ.ಎಸ್ ಅಧಿಕಾರಿಯಾದ ಡಾ.ರವಿಶಂಕರ್ ಅವರನ್ನು ಚುನಾವಣಾ ವೀಕ್ಷಕರನ್ನಾಗಿ ನೇಮಕ ಮಾಡಲಾಗಿದೆ. ಸಹಾಯಕ ಅಧಿಕಾರಿಯಾಗಿ ಮೈಸೂರು ನಗರದ ಅಬಕಾರಿ ಉಪ ಆಯುಕ್ತರಾದ ಎಸ್. ನಾಗರಾಜಪ್ಪ ನೇಮಕ ಮಾಡಲಾಗಿದೆ. 7204214565 ಮತ್ತು 9449597178 ದೂರವಾಣಿ ಸಂಖ್ಯೆಗೆ ಸಂಪರ್ಕಿಸಿ.
ಕರ್ನಾಟಕ ನೈರುತ್ಯ ಪದವೀಧರರ ಕ್ಷೇತ್ರ 11 ನಾಮಪತ್ರ ಸಲ್ಲಿಸಿದ್ದು 11 ನಾಮಪತ್ರಗಳು ಅಂಗೀಕೃತಗೊಂಡಿವೆ.
ಕರ್ನಾಟಕ ನೈರುತ್ಯ ಶಿಕ್ಷಕರ ಕ್ಷೇತ್ರ 10 ನಾಮಪತ್ರ ಸಲ್ಲಿಸಿದ್ದು 9 ಅಂಗೀಕೃತಗೊಂಡಿವೆ. 1 ತಿರಸ್ಕೃತಗೊಂಡಿದೆ.
ಇದನ್ನೂ ಓದಿ-https://suddilive.in/archives/14985