ಸುದ್ದಿಲೈವ್/ಮೈಸೂರು
ನೈರುತ್ಯ ಪದವೀಧರರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ್ ನಾಮಪತ್ರ ಸಲ್ಲಿಸಿದ್ದಾರೆ.
ಮೈಸೂರಿನ ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ಆಯನೂರು ಮಂಜುನಾಥ್ ನಾಮಪತ್ರ ಸಲ್ಲಿಸಿದರು. ಈ ವೇಳೆ ಸಚಿವ ಮಧು ಬಂಗಾರಪ್ಪ, ಶಾಸಕ ತನದವೀರ್ ಸೇಠ್, ಹೊನ್ನಾಳಿ ಶಾಸಕ ಶಾಂತನಗೌಡ ಮೊದಲಾದವರು ಉಪಸ್ಥಿತರಿದ್ದರು.
ಅದರಂತೆ ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಡಾ.ಧನಂಜಯ್ ಸರ್ಜಿ ಉಮೇದುವಾರಿಕೆ ಸಲ್ಲಿಸಿದ್ದಾರೆ. ಈ ವೇಳೆ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರ್ ಸ್ವಾಮಿ, ಸಂಸದ ರಾಘವೇಂದ್ರ, ಮಾಜಿ ಎಂಎಲ್ ಸಿ ಗಣೇಶ್ ಕಾರ್ಣಿಕ್ ಉಪಸ್ಥಿತರಿದ್ದರು.
ಬುಧವಾರ 21 ಮಂದಿ ನಾಮಪತ್ರ ವಿಧಾನ ಪರಿಷತ್‌ನ ಪದವೀಧರರ ಮತ್ತು ಶಿಕ್ಷಕರ ತಲಾ ಮೂರು ಕ್ಷೇತ್ರಗಳಿಗೆ ನಡೆಯುತ್ತಿರುವ ಚುನಾವಣೆಯಲ್ಲಿ ಬುಧವಾರ 21 ಮಂದಿ ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಕೆಗೆ ಇಂದು ಕೊನೆಯ ದಿನವಾಗಿದೆ.
ಈಶಾನ್ಯ ಪದವೀಧರರ ಕ್ಷೇತ್ರದಲ್ಲಿ ಅತ್ಯಧಿಕ 14 ಮಂದಿ ನಾಮಪತ್ರ ಸಲ್ಲಿಸಿದ್ದಾರೆ. ಬೆಂಗಳೂರು ಪದವೀಧರರ ಕ್ಷೇತ್ರದಲ್ಲಿ 11, ನೈರುತ್ಯ ಶಿಕ್ಷಕರ ಕ್ಷೇತ್ರದಲ್ಲಿ ಎಂಟು, ಆಗ್ನೇಯ ಶಿಕ್ಷಕರ ಕ್ಷೇತ್ರ ಮತ್ತು ನೈರುತ್ಯ ಪದವೀಧರರ ಕ್ಷೇತ್ರಗಳಲ್ಲಿ ತಲಾ ಆರು ಹಾಗೂ ದಕ್ಷಿಣ ಶಿಕ್ಷಕರ ಕ್ಷೇತ್ರದಲ್ಲಿ ನಾಲ್ವರು ನಾಮಪತ್ರವನ್ನ ನಿನ್ನೆಯವರೆಗೆ ಸಲ್ಲಿಸಿದ್ದಾರೆ.
ಇದನ್ನೂ ಓದಿ-https://suddilive.in/archives/14843