ಕಾಡಾನೆ ದಾಳಿಗೆ ಓರ್ವ ಬಲಿ

ಸುದ್ದಿಲೈವ್/ಹೊಸನಗರ

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಅರಸಾಳು ಗ್ರಾಪಂ ವ್ಯಾಪ್ತಿಯ ಬಸವಾಪುರ ಗ್ರಾಮದಲ್ಲಿ ಕಾಡಾನೆ ದಾಳಿಗೆ ವ್ಯಕ್ತಿಯೊಬ್ಬರು ಬಲಿಯಾದ ಘಟನೆ ನಡೆದಿದೆ.

ಬಸವಾಪುರ ಗ್ರಾಮದ ತಿಮ್ಮಪ್ಪ (58) ಮೃತ ವ್ಯಕ್ತಿಯಾಗಿದ್ದಾರೆ.ಇಂದು ಬೆಳಗ್ಗೆ ತಮ್ಮ ಮನೆ ಸಮೀಪದ ಕಾಡಿಗೆ ದರಗು ತರಲು ಹೋದ ವೇಳೆ ಈ ಘಟನೆ ನಡೆದಿದೆ.

ಪತ್ನಿ ಮತ್ತು ಮಕ್ಕಳು ಈ ಸಂಧರ್ಭದಲ್ಲಿ ಆನೆ ದಾಳಿಯಿಂದ ಪಾರಾಗಿದ್ದಾರೆ ಎನ್ನಲಾಗುತ್ತಿದೆ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಾಗಿದೆ. ರಿಪ್ಪನ್‌ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಇದನ್ನೂ ಓದಿ-https://suddilive.in/archives/14071

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close