Girl in a jacket

ಉಚಿತವಾಗಿ ಮತದಾರರ ಭಾವಚಿತ್ರ ಸಹಿತ ಮತದಾರರ ಪಟ್ಟಿಯನ್ನು ಒದಗಿಸಲು ಆಗ್ರಹ

ಸುದ್ದಿಲೈವ್/ಶಿವಮೊಗ್ಗ

ರಾಷ್ಟ್ರೀಯ ಪಕ್ಷಗಳ ಅಭ್ಯರ್ಥಿಗಳಿಗೆ ನೀಡುವಂತೆಯೇ ಪಕ್ಷೇತರ ಅಭ್ಯರ್ಥಿಗಳಿಗೂ ಉಚಿತವಾಗಿ ಮತದಾರರ ಪಟ್ಟಿಯನ್ನು ಒದಗಿಸುವಂತೆ ವಿಧಾನ ಪರಿಷತ್‍ನ ನೈರುತ್ಯ ಪದವೀಧರರ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಷಡಾಕ್ಷರಪ್ಪ ಜಿ.ಆರ್. ಮುಖ್ಯ ಚುನಾವಣಾಧಿಕಾರಿಗಳಿಗೆ ಆಗ್ರಹಿಸಿದ್ದಾರೆ.

ಬುಧವಾರ ಅಪರ ಜಿಲ್ಲಾಧಿಕಾರಿಗಳ ಮೂಲಕ ಮನವಿ ಸಲ್ಲಿಸಿದರುವ ಅವರು, ಕರ್ನಾಟಕ ರಾಜ್ಯ ವಿಧಾನ ಪರಿಷತ್‍ನ ಪಕ್ಷೇತರ ಅಭ್ಯರ್ಥಿಗಳಾಗಿ ಸ್ಪರ್ಧಿಸಿದವರಿಗೆ ಮತದಾರರ ಪಟ್ಟಿಯ ಪ್ರತಿಗಳನ್ನು ಒದಗಿಸಿರುವುದಿಲ್ಲ. ರಾಷ್ಟ್ರೀಯ ಹಾಗೂ ರಾಜ್ಯ ಪಕ್ಷದ ಅಭ್ಯರ್ಥಿಗಳಂತೆಯೇ ಪಕ್ಷೇತರ ಅಭ್ಯರ್ಥಿಗಳೂ ನಿಗಧಿತ ಠೇವಣಿ ಸಲ್ಲಿಸಿ ಸ್ಪರ್ಧೆ ಮಾಡಿರುತ್ತಾರೆ. ಆದರೆ, ಚುನಾವಣಾ ಆಯೋಗ ಅಭ್ಯರ್ಥಿಗಳಿಗೆ ಈ ರೀತಿ ತಾರತಮ್ಯ ನಡೆಸುವುದು ಸರಿಯಲ್ಲ ಎಂದು ತಿಳಿಸಿದ್ದಾರೆ.

ಮತದಾರರ ಪಟ್ಟಿ ಇಲ್ಲದೇ ಮತದಾರರನ್ನು ಅಭ್ಯರ್ಥಿಗಳು ಸಕಾಲದಲ್ಲಿ ಸಂಪರ್ಕಿಸಲು ಕಷ್ಟಸಾಧ್ಯವಾಗುತ್ತದೆ. ಆದ್ದರಿಂದ ಮುಖ್ಯ ಚುನಾವಣಾಧಿಕಾರಿಗಳು ಕೂಡಲೇ ವಿಧಾನ ಪರಿಷತ್‍ನ ಎಲ್ಲಾ ಪಕ್ಷೇತರ ಅಭ್ಯರ್ಥಿಗಳಿಗೂ ತ್ವರಿತವಾಗಿ ಭಾವಚಿತ್ರ ಸಹಿತದ ಮತದಾರರ ಪಟ್ಟಿಯನ್ನು ರಾಷ್ಟ್ರೀಯ – ರಾಜ್ಯ ಪಕ್ಷಗಳ ಅಭ್ಯರ್ಥಿಗಳಿಗೆ ಒದಗಿಸಿದಂತೆ ಉಚಿತವಾಗಿ ಒದಗಿಸುವಂತೆ ಆಗ್ರಹಿಸಿದ್ದಾರೆ.

ಮನವಿ ಸಲ್ಲಿಸುವ ಸಂದರ್ಭದಲ್ಲಿ ಚಿತ್ರಪ್ಪ ಯರಬಾಳ, ಎಂ. ಅಣ್ಣಪ್ಪ ಉಪಸ್ಥಿತರಿದ್ದರು.

ಇದನ್ನೂ ಓದಿ-https://suddilive.in/archives/15304

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು