Girl in a jacket

ವಾಲ್ಮೀಕಿ ಅಭಿವೃದ್ಧಿ ನಿಗಮದ ಬ್ರಹ್ಮಾಂಡ ಭ್ರಷ್ಠಾಚಾರ-ವಿಶೇಷ ತನಿಖಾ ತಂಡ ರಚನೆ

ಸುದ್ದಿಲೈವ್/ಶಿವಮೊಗ್ಗ

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ‌ ಭ್ರಷ್ಠಾಚಾರ ಪ್ರಕರಣ ಮತ್ತು ಅಧೀಕ್ಷ ಚಂದ್ರಶೇಖರ್ ಅವರ ಆತ್ಮಹತ್ಯೆ ಪ್ರಕರಣವನ್ನ ಬೇಧಿಸಲು ಸಿಐಡಿಯ ವಿಶೇಷ ತನಿಖಾ‌ತಂಡ ಅಂದರೆ ಎಸ್ಐಟಿಯನ್ನ ರಚಿಸಿ ಸರ್ಕಾರ ಆದೇಶಿಸಿದೆ.

ನಿಗಮದಲ್ಲಿ ಭ್ರಷ್ಠಾಚಾರ ನಡೆದಿದೆ ಎಂದು ಬೆಂಗಳೂರಿನ ಹೈಗ್ರೌಂಡ್ ಪೊಲೀಸ್ ಸ್ಟೇಷನ್ ನಲ್ಲಿ ನಿಗಮದ ಪ್ರಧಾನ ವ್ಯವಸ್ಥಾಪಕ ಪ್ರಕರಣ ದಾಖಲಿಸಿದ್ದರು. ಅದರಂತೆ ಶಿವಮೊಗ್ಗ ವಿನೋಬ ನಗರ ಪೊಲೀಸ್ ಠಾಣೆಯಲ್ಲಿ ಚಂದ್ರಶೇಖರ್ ಆತ್ಮಹತ್ಯೆಯ ಬಗ್ಗೆ ಅನುಮಾನ ವ್ಯಕ್ತಪಡಿಸಿ ಎಫ್ಐಆರ್‌ದಾಖಲಾಗಿತ್ತು.

ಈ ಎರಡೂ ಪ್ರಕರಣದಲ್ಲಿ ಎಸ್ಐಟಿ ರಚಿಸಿ ಸರ್ಕಾರ ಆದೇಶಿಸಿತ್ತು. ಸಿಬಿಐನ ತಂಡದಲ್ಲಿ ವಿಶೇಷ ತಂಡ ರಚಿಸಿರುವ ಸರ್ಕಾರ ಇದರ ಮುಖ್ಯಸ್ಥರನ್ನಾಗಿ ಸಿಬಿಐನ ಆರ್ಥಿಕ ಅಪರಾಧ ವಿಭಾಗದ ಅಪರ ಪೊಲೀಸ್ ನಿರ್ದೇಶಕ ಮನೀಷ್ ಖರ್ಬೀಕರ್ ರನ್ನ ಮುಖ್ಯಸ್ಥರನ್ನಾಗಿಯೂ, ಬೆಂಗಳೂರು ದಕ್ಷಿಣ ಸಂಚಾರಿ ಪೊಲೀಸ್ ಆಯುಕ್ತ ಶಿವಪ್ರಕಾಶ್ ದೇವರಾಜ್,

ರಾಜ್ಯ ಗುಪ್ತೆ ವಾರ್ತೆಯ ಪೊಲೀಸ್ ಅಧೀಕ್ಷಕ ರಾಘವೇಂದ್ರ ಕೆ. ಹೆಗಡೆ, ಸಿಐಡಿಯ ಪೊಲೀಸ್ ಅಧೀಕ್ಷಕ ರಾಘವೇಂದ್ರ ಕೆ ಹೆಗಡೆಅವರನ್ನ ವಿಶೇಷ ತನಿಖಾ ತಂಡದ ಸದಸ್ಯರನ್ನಾಗಿ ನೇಮಿಸಿ ಸರ್ಕಾರ ಆದೇಶಿಸಿದೆ.

ಇದನ್ನೂ ಓದಿ-https://suddilive.in/archives/15921

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು