ಸುದ್ದಿಲೈವ್/ಶಿವಮೊಗ್ಗ
ವಿಧಾನ ಪರಿಷತ್ ನೈರುತ್ಯ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರದ ಚುನಾವಣೆ ಹಿನ್ನೆಲೆಯಲ್ಲಿ ಶಿಕಾರಿಪುರ ತಾಲ್ಲೂಕು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ, ನೈರುತ್ಯ ಪದವೀಧರ ಕ್ಷೇತ್ರದ ಅಭ್ಯರ್ಥಿ ಡಾ ಧನಂಜಯ ಸರ್ಜಿಯವರು ಭೇಟಿ ನೀಡಿ ಮತಯಾಚಿಸಿದರು.
ಆಡಳಿತ ವರ್ಗ, ಶಿಕ್ಷಕರ ವರ್ಗ, ಕಾಲೇಜಿನ ಸಿಬ್ಬಂದಿಯವರೊಂದಿಗೆ ಸಂವಾದ ನಡೆಸಿ ಮೈತ್ರಿ ಅಭ್ಯರ್ಥಿಗಳನ್ನು ಬೆಂಬಲಿಸುವಂತೆ ಹಾಗೂ ಅತ್ಯಂತ ಹೆಚ್ಚಿನ ಮತಗಳ ಅಂತರದಿಂದ ಗೆಲ್ಲಿಸುವಂತೆ ಮತಯಾಚಿಸಿದರು.
ಈ ವೇಳೆ ಎಂಎಡಿಬಿ ಮಾಜಿ ಅಧ್ಯಕ್ಷರಾದ ಗುರುಮೂರ್ತಿ, ತಾಲ್ಲೂಕು ಬಿಜೆಪಿ ಅಧ್ಯಕ್ಷರಾದ ಸಂಕ್ಲಾಪುರ ಹನುಮಂತಪ್ಪ, ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ. ಶೇಖರ್ , ಸ್ಥಳೀಯ ಬಿಜೆಪಿ ಮುಖಂಡರು , ಕಾಲೇಜಿನ ಆಡಳಿತ ವರ್ಗ ಹಾಗೂ ಸಿಬ್ಬಂದಿವರ್ಗದವರು ಉಪಸ್ಥಿತರಿದ್ದರು.
ಇದನ್ನೂ ಓದಿ-https://suddilive.in/archives/15720
Tags:
ಸ್ಥಳೀಯ ಸುದ್ದಿಗಳು