Girl in a jacket

ವಿಧಿತ ಗೌಡಗೆ ರಾಜ್ಯಮಟ್ಟದ ಪ್ರತಿಭಾ ಪುರಸ್ಕಾರ

ಸುದ್ದಿಲೈವ್

ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ ಬೆಂಗಳೂರು ವತಿಯಿಂದ ಹಾವೇರಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಆಯೋಜಿಸಿದ್ದ ರಾಜ್ಯ ಮಟ್ಟದ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ವಿಧಿತ ಗೌಡಗೆ ಸನ್ಮಾನಿಸಲಾಯಿತು.‌

ಶಿವಮೊಗ್ಗ ಜಿಲ್ಲೆಯ ಬೆಳಗಿನ ವಿಧಾತ ದಿನಪತ್ರಿಕೆಯ ಸಂಪಾದಕರು ಮತ್ತು ಮಾಲೀಕರಾದ ಅನಿಲ್ ಮತ್ತು ಭಾಗ್ಯ ಅನಿಲ್ ರವರ ಪುತ್ರಿ ತೀರ್ಥಹಳ್ಳಿಯ ಸಹ್ಯಾದ್ರಿ ವಿದ್ಯಾಸಂಸ್ಥೆಯಲ್ಲಿ 2023-24 ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಶೇ.96.83 ಅಂಕ ಪಡೆದು ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆಯಾಗಿ ಶಾಲೆಗೆ ಮೊದಲಿಗಳಾಗಿ ಹೊರಹೊಮ್ಮಿದ ಪ್ರಸ್ತುತ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆಯ ಎಕ್ಸೆಲ್ ಪಿಯು ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವ ವಿಧಿತ ಗೌಡ.ಟಿ.ಎ. ಇವರನ್ನು ಶ್ಲಾಘಿಸಿ ಪ್ರತಿಭಾ ಪುರಸ್ಕಾರವನ್ನು ನೀಡಲಾಯಿತು.

ಈ ಸಂದರ್ಭದಲ್ಲಿ ರಾಜ್ಯದ ಮಾಜಿ ಮುಖ್ಯಮಂತ್ರಿಗಳೂ ಹಾಗೂ ಸಂಸದರಾದ ಬಸವರಾಜ್ ಬೊಮ್ಮಾಯಿ,ಜವಳಿ ಮತ್ತು ಕಬ್ಬು ಅಭಿವೃದ್ಧಿ ಹಾಗೂ ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವರಾದಂತಹ ಶಿವಾನಂದ ಪಾಟೀಲ್, ಕಾನೂನು ಮತ್ತು ಸಂಸದೀಯ ಹಾಗೂ ಪ್ರವಾಸೋದ್ಯಮ ಸಚಿವರಾದ ಹೆಚ್.ಕೆ.ಪಾಟೀಲ್, ಕರ್ನಾಟಕ ವಿಧಾನ ಸಭೆಯ ಉಪಸಭಾಧ್ಯಕ್ಷರಾದ ರುದ್ರಪ್ಪ ಮಾ.ಲಮಾಣಿ ,

ವಿಧಾನ ಪರಿಷತ್‌ ನ ಮುಖ್ಯ ಸಚೇತಕರಾದ ಸಲೀಂ ಅಹಮದ್, ಮುಖ್ಯ ಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್,ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಸೇರಿದಂತೆ ಹಾನಗಲ್ ಶಾಸಕ ಶ್ರೀನಿವಾಸ ಮಾನೆ,ಬ್ಯಾಡಗಿ ಶಾಸಕ ಬಸವರಾಜ.ನೀ.ಶಿವಣ್ಣನವರ,ಹಿರೇಕೇರೂರು ಶಾಸಕ ಯು.ಬಿ.ಬಣಕರ್,ರಾಣೆಬೆನ್ನೂರು ಶಾಸಕ ಪ್ರಕಾಶ ಕೋಳಿವಾಡ,ಜಿಲ್ಲಾಧಿಜಾರಿಗಳಾದ ರಘುನಂದನ್ ಮೂರ್ತಿ, ಪೊಲೀಸ್ ವರಿಷ್ಠಾಧಿಕಾರಿಗಳಾದ ಅಂಶುಕುಮಾರ್ ಉಪಸ್ಥಿತರಿದ್ದರು.

ಇದನ್ನೂ ಓದಿ-https://suddilive.in/archives/18154

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
close