ಸುದ್ದಿಲೈವ್/ಸೊರಬ
ದೇಶಾದ್ಯಂತ ತೀವ್ರ ಕುತೂಹಲ ಕೆರಳಿಸಿದ್ದ ಲೋಕಸಭೆ ಚುನಾವಣೆ ಫಲಿತಾಂಶದಲ್ಲಿ ಬಿಜೆಪಿಗೆ ಮತದಾರರು ಆಶೀರ್ವಾದ ಮಾಡಿರುವ ಹಿನ್ನೆಲೆಯಲ್ಲಿ ಮಂಗಳವಾರ ನಗರದ ಪ್ರಮುಖ ಬೀದಿಗಳಲ್ಲಿ ಬೈಕ್ ರ್ಯಾಲಿ ಮೂಲಕ ಪಟ್ಟಣದ ರೈತ ವೃತ್ತದ ಬಳಿ ತೆರಳಿ ಪಟಾಕಿ ಸಿಡಿಸಿ ಸಿಹಿ ಹಂಚಿ ಬಿಜೆಪಿ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು.
ಮಾಜಿ ಪುರಸಭಾ ಅಧ್ಯಕ್ಷ ಎಂ ಡಿ ಉಮೇಶ್ ಮಾತನಾಡಿ ಕಳೆದ ಐದು ವರ್ಷದ ಆಡಳಿತಾವಧಿಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಹಾಗೂ ಸಂಸದ ಬಿ. ವೈ. ರಾಘವೇಂದ್ರ ಮಾಡಿರುವ ಉತ್ತಮ ಕಾರ್ಯ ನೋಡಿ ಜಿಲ್ಲೆಯ ಮತದಾರರು ಬಿಜೆಪಿಗೆ ಗೆಲುವಿನ ಮಾಲೆ ಹಾಕಿದ್ದಾರೆ. ಇದರಿಂದ ನಮ್ಮ ಪಕ್ಷದ ಹಾಗೂ ಸಂಸದ ಬಿ. ವೈ. ರಾಘವೇಂದ್ರ ಮೇಲೆ ಜಿಲ್ಲೆಯ ಜನರು ಇಟ್ಟಿರುವ ನಂಬಿಕೆ ಉಳಿಸಿಕೊಳ್ಳಲು ಸಚಿವರಾಗಿ ಬಂದು ಉತ್ತಮ ಆಡಳಿತ ನೀಡುವ ಮೂಲಕ ಮತದಾರರ ಋಣ ತೀರಿಸುತ್ತಾರೆ ಎಂದು ಹೇಳಿದರು.
ರಾಘವೇಂದ್ರ ಅವರ ಗೆಲುವಿನ ಹಿನ್ನೆಲೆಯಲ್ಲಿ ತಾಲುಕು ಬಿಜೆಪಿ ಕಾರ್ಯಕರ್ತರ ಸಂಭ್ರಮ ಮುಗಿಲುಮುಟ್ಟಿತು.
ಈ ಸಂಧರ್ಭದಲ್ಲಿ ಬಿಜೆಪಿಯ ಎಲ್ಲಾ ಮುಖಂಡರು ಮತ್ತು ಕಾರ್ಯಕರ್ತರು ಉಪಸ್ಥಿರಿದ್ದರು