Girl in a jacket

ಡಾ.ಸರ್ಜಿ ಪರ ಭರ್ಜರಿ ಕ್ಯಾಂಪಿಯನ್

ಸುದ್ದಿಲೈವ್/ಶಿವಮೊಗ್ಗ

ವಿಧಾನ ಪರಿಷತ್ ನೈರುತ್ಯ ಪದವೀಧರ ಕ್ಷೇತ್ರದ ಹಾಗೂ ನೈರುತ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯ ಹಿನ್ನೆಲೆಯಲ್ಲಿ ಇಂದು ಚಿಕ್ಕಮಗಳೂರು ಜಿಲ್ಲೆಯಲ್ಲಿ ಪ್ರಚಾರ ನಡೆಸಲಾಗಿದೆ.‌

ಶೃಂಗೇರಿ ವಿಧಾನಸಭಾ ಕ್ಷೇತ್ರದ ಕೊಪ್ಪ ಮಂಡಲ ಬಿಜೆಪಿ ಕಚೇರಿಯಲ್ಲಿ ಮತದಾರರ ಮತ್ತು ಕಾರ್ಯಕರ್ತರ ಸಭೆಯನ್ನು ಆಯೋಜಿಸಲಾಗಿತ್ತು. ಅದರ ಜೊತೆಗೆ ಖುದ್ದು ಡಾ.ಸರ್ಜಿ ಅವರು ಶೃಂಗೇರಿ ಶಾರದಾಂಬೆಗೆ ಪೂಜೆ ಸಲ್ಲಿಸಿದ್ದರು. ಶೃಂಗೇರಿ ಜಗದ್ಗುರು ಶ್ರೀ ಶ್ರೀ ವಿಧುಶೇಖರ ಭಾರತೀ ಸನ್ನಿಧಾನಂ ಅವರನ್ನ‌ ಭೇಟಿ ಮಾಡಿ ಆಶೀರ್ವಾದ ಪಡೆದರು.

ನಂತರ ಕುಂದಾಪುರದಲ್ಲಿ ಡಾ.ಸರ್ಜಿ ಅವರ ಮತಬೇಟೆ ಮುಂದುವರೆದಿದೆ. ಕುಂದಾಪುರದ ಸರ್ಕಾರೀ ಪದವಿ ಪೂರ್ವ ಕಾಲೇಜು, ವೆಂಕಟರಮಣ ಪದವಿ ಪೂರ್ವ ಕಾಲೇಜು, ನ್ಯಾಯಾಲಯ ಸಂಕೀರ್ಣಗಳಲ್ಲಿ ನೈಋತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ಡಾ. ಧನಂಜಯ ಸರ್ಜಿ ಹಾಗೂ ನೈರುತ್ಯ ಶಿಕ್ಷಕರ ಕ್ಷೇತ್ರದ NDA ಅಭ್ಯರ್ಥಿಯಾಗಿರುವ ಭೋಜೇಗೌಡ ಅವರ ಪರವಾಗಿ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಎ.ಕಿರಣ್ ಕುಮಾರ್ ಕೊಡ್ಗಿ ಅವರು ಭೇಟಿ ನೀಡಿ ಅಭ್ಯರ್ಥಿಗಳ ಪರವಾಗಿ ಮತಯಾಚನೆ ಮಾಡಿದರು.

ಇದನ್ನೂ ಓದಿ-https://suddilive.in/archives/15998

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು