ಬುಧವಾರ, ಜುಲೈ 10, 2024

ಸರ್ಕಾರಿ ನೌಕರರಿಂದ ಶಾಸಕರಿಗೆ ಮತ್ತು ಜಿಲ್ಲಾಧಿಕಾರಿಗಳಿಗೆ ಮನವಿ

ಸುದ್ದಿಲೈವ್/ಶಿವಮೊಗ್ಗ

ಇಂದು ಮಧ್ಯಾಹ್ನ ಕರ್ನಾಟಕ ರಾಜ್ಯ ಸರ್ಕಾರಿ ನೌಕರ ಸಂಘದ ಪದಾಧಿಕಾರಿಗಳು ಹಾಗೂ ಸದಸ್ಯರು ಅಪರ ಜಿಲ್ಲಾಧಿಕಾರಿ ಮತ್ತು ಶಿವಮೊಗ್ಗ ನಗರದ ಶಾಸಕರಾದ ಎಸ್ಎನ್ ಚನ್ನಬಸಪ್ಪ ಅವರನ್ನು  ಭೇಟಿ ಮಾಡಿ 7 ನೇ ವೇತನ ಕುರಿತಂತೆ ಮನವಿ ಸಲ್ಲಿಸಲಾಯಿತು.‌

1. ರಾಜ್ಯ 7ನೇ ವೇತನ ಆಯೋಗವು ಸರ್ಕಾರಕ್ಕೆ ಸಲ್ಲಿಸುವ ವರದಿಯನ್ನು ಯಥಾವತ್ತಾಗಿ ಜಾರಿಗೊಳಿಸಿ ಸರ್ಕಾರಿ ಆದೇಶ ಹೊರಡಿಸುವಂತೆ

2. ಎನ್‌ಪಿಎಸ್ ರದ್ದುಪಡಿಸಿ ಹಳೆ ಪಿಂಚಣಿ ಯೋಜನೆಯನ್ನು ಮರು ಜಾರಿಗೊಳಿಸುವಂತೆ
3. ಕರ್ನಾಟಕ ರಾಜ್ಯ ಆರೋಗ್ಯ ಸಂಜೀವಿನಿ ಯೋಜನೆ ಅನುಷ್ಠಾನಗೊಳಿಸುವಂತೆ ಸರ್ಕಾರ ಕ್ರಮ ಜರುಗಿಸಬೇಕೆಂದು ಹಾಗೂ

ಶಾಸಕರು ನೌಕರರ ಬೇಡಿಕೆಗಳನ್ನು ಮುಂಬರುವ ಅಧಿವೇಶನದಲ್ಲಿ ಪ್ರಸ್ತಾಪಿಸುವಂತೆ ಮನವಿ ಸಲ್ಲಿಸಿದರು. ಜು.7 ರಂದು ಸಂಘದ ಅಧ್ಯಕ್ಷ ಸಿಎಸ್ ಷಡಾಕ್ಷರಿಯ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಪ್ರತಿ ಜಿಲ್ಲೆಯಲ್ಲಿ ಆಯಾ ಶಾಸಕರು, ಡಿಸಿ, ತಹಶೀಲ್ದಾರ್ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ ನೀಡುವುದಾಗಿ ತೀರ್ಮಾನಿಸಲಾಗಿತ್ತು.

ಅದರಂತೆ ಜು.8 ರಿಂದ 14ರವರೆಗೆ ಮನವಿ ನೀಡುವ ಕೆಲಸದಲ್ಲಿ ಸಂಘ ತೊಡಗಿಸಿಕೊಳ್ಳಲಿದೆ. ಆ.1 ರಿಂದ ಕೆಲಸಕ್ಕೆ ಗೈರು ಹಾಜರಿಯಾಗುವ ಮೂಲಕ ಪ್ರಯಿಭಟನೆಗೆ ಇಳಿಯಲಿದೆ.

ಇದನ್ನೂ ಓದಿ-https://suddilive.in/archives/18943

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ