ಶನಿವಾರ, ಜುಲೈ 27, 2024

ಚೊಂಬು ಹಿಡಿದು ಕಾಂಗ್ರೆಸ್ ಪ್ರತಿಭಟನೆ




ಸುದ್ದಿಲೈವ್/ಶಿವಮೊಗ್ಗ


ಕೇಂದ್ರ ಸರ್ಕಾರದ ಮಲತಾಯಿ ಧೋರಣೆಯನ್ನು ಖಂಡಿಸಿ ಶಿವಮೊಗ್ಗದಲ್ಲಿ ಜಿಲ್ಲಾ ಕಾಂಗ್ರೆಸ್ ಚೊಂಬು ಪ್ರದರ್ಶನ ಹಾಗೂ ಪ್ರತಿಭಟನ ಮೆರವಣಿಗೆ ನಡೆಸಿತು. ಜಿಲ್ಲಾ ಕಾಂಗ್ರೆಸ್ ನಿಂದ ಮಹಾವೀರ ವೃತ್ತ ವರೆಗೆ ಮೆರವಣಿಗೆ ನಡೆಸಲಾಯಿತು. 


ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಇತ್ತೀಚಿನ ಬಜೆಟ್ ಮಂಡನೆಯಲ್ಲಿ ರಾಜ್ಯಕ್ಕೆ ಯಾವುದೇ ಹೊಸ ಯೋಜನೆ ಅಥವಾ ಹಿಂದಿನ ಯೋಜನೆಗಳಿಗೆ ಯಾವುದೇ ಅನುದಾನವನ್ನು ಮೀಸಲಿಡದೆ ಅನ್ಯಾಯ ಮಾಡಿದೆ ಎಂದು ಆಕ್ರೋಶ ವ್ಯಕ್ತಪಡಿಸಲಾಯಿತು.  


ಚೊಂಬು ಕೊಟ್ಟು ಅನ್ಯಾಯ ವೆಸಿಗಿದೆ ಎಂದು ಇಂದು ಬೆಳಗ್ಗೆ 11 ಗಂಟೆಗೆ  ಕಾಂಗ್ರೆಸ್ ಭವನದಿಂದ ಕಾರ್ಯಕರ್ತರು ಚೊಂಬು ಪ್ರದರ್ಶನದೊಂದಿಗೆ  ತೆರಳಿ ಮಹಾವೀರ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು. 


ಪ್ರತಿಭಟನೆಯಲ್ಲಿ ಜಿಲ್ಲಾ ಕಾಂಗ್ರೆಸ್  ಅಧ್ಯಕ್ಷರು, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ದೇವೇಂದ್ರಪ್ಪ, ಸೂಡಾ ಅಧ್ಯಕ್ಷ  ಹೆಚ್ ಎಸ್ ಸುಂದರೇಶ್, ಮಾಜಿ ಕಾರ್ಪರೇಟರ್ ಹೆಚ್ ಸಿ ಯೋಗೀಶ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶಿವಕುಮಾರ್, ಕಲೀಂ ಪಾಷ, ಕೆಪಿಸಿಸಿ ಹಿಂದುಳಿದ ವರ್ಗಗಳ ರಾಜ್ಯ ಸಂಯೋಜಕ  ಜಿ.ಡಿ ಮಂಜುನಾಥ್ ಉಪಸ್ಥಿತರಿದ್ದರು. 


ಇದನ್ನೂ ಓದಿ-https://www.suddilive.in/2024/07/blog-post_670.html

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ