ಸುದ್ದಿಲೈವ್/ಶಿವಮೊಗ್ಗ
ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ ಕುಸಿತವಾಗಿದ್ದು ಕುಸಿತದಿಂದಾಗಿ ಹೆಚ್ಚಾರಿ ಬಂದ್ ಆಗಿದೆ. ಪರಿಣಾಮ ವಾಹನ ಸಂಚಾರ ಅಸ್ತವ್ಯಸ್ತವಾಗಿದೆ.
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ನಗರ ಹೋಬಳಿಯ ಸಮಗೋಡು ಸಮೀಪ ಭಾರೀ ಗುಡ್ಡ ಕುಸಿತವಾಗಿದೆ. ಗುಡ್ಡ ಕುಸಿದ ಪರಿಣಾಮ ರಾಣಿಬೆನ್ನೂರು-ಬೈಂದೂರು ರಾಷ್ಟ್ರೀಯ ಹೆದ್ದಾರಿ-766c ಯಲ್ಲಿ ವಾಹನ ಸಂಚಾರ ಸ್ಥಗಿತವಾಗಿದೆ.
ಹೊಸನಗರ ತಾಲೂಕಿನಲ್ಲಿ ಭಾರೀ ಮಳೆ ಸುರಿಯುತ್ತಿದ್ದು ಹಲವು ಅವಘಡ ಸೃಷ್ಟಿಸಿದೆ. ಜೆಸಿಬಿ ಯಂತ್ರ ಬಳಸಿ ಮಣ್ಣು ತೆರೆಯುವ ಕಾರ್ಯ ಆರಂಭವಾಗಿದೆ. ಮಳೆಯಿಂದ ಮಣ್ಣು ತೆಗಿಯುವ ಕಾರ್ಯಕ್ಕೆ ಅಡ್ಡಿಯಾಗಿದೆ.
ಇದನ್ನೂ ಓದಿ-https://suddilive.in/archives/18397
Tags:
ರಾಷ್ಟ್ರೀಯ ಸುದ್ದಿಗಳು