ಸುದ್ದಿಲೈವ್/ಶಿವಮೊಗ್ಗ
ನಗರ ಮೆಸ್ಕಾಂ ಉಪವಿಭಾಗ-1, ಘಟಕ-1ರ ವ್ಯಾಪ್ತಿಯಲ್ಲಿ ಪ್ರಿಯಾಂಕ ಬಡಾವಣೆ ಮುಖ್ಯರಸ್ತೆಯಲ್ಲಿರುವ ಹಳೆಯ ಕಂಬ ಬದಲಿಸುವ ಕಾಮಗಾರಿ ಇರುವುದರಿಂದ ಹಾಗೂ
ಪ್ರಿಯಾಂಕ ಬಡಾವಣೆ ಮತ್ತು ಪಂಡಿತ್ ಬಡಾವಣೆಯಲ್ಲಿ ಹಾಗೂ ಘಟಕ-3ರ ವ್ಯಾಪ್ತಿಯಲ್ಲಿ ಹೆಚ್ಚುವರಿ ಪರಿವರ್ತಕ ಅಳವಡಿಸುವ ಕಾಮಗಾರಿ ಇರುವುದರಿಂದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಅಭಾವ ಉಂಟಾಗಲಿದೆ.
ಹಳೆ ಬೊಮ್ಮನಕಟ್ಟೆ, ಮಮತಾನಗರ, ದೇವಂಗಿ 2ನೇ ಹಂತದ ಬಡಾವಣೆ, ಪಾರ್ವತಮ್ಮ ಬಡಾವಣೆ ಹಾಗೂ ಮಹಾರಾಣಿ ಶಾಲೆಯ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಜು.16 ರಂದು ಬೆಳಗ್ಗೆ 10.00 ರಿಂದ ಸಂಜೆ 6.00ರವರೆಗೆ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.
ಇದನ್ನೂ ಓದಿ-https://suddilive.in/archives/19366
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ