ಶುಕ್ರವಾರ, ಜುಲೈ 12, 2024

ವಿದ್ಯುತ್ ಶಾಕ್ ನಿಂದ ಯುವಕ ಸಾವು?

ಸುದ್ದಿಲೈವ್/ರಿಪ್ಪನ್ ಪೇಟೆ

ವಿದ್ಯುತ್ ತಗುಲಿ ಯುವಕ ಸಾವುಕಂಡಿದ್ದಾನೆ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್ ಪೇಟೆ ಬಳಿಯ ಗವಟೂರಿನ ಹಳೂರು ಗ್ರಾಮದಲ್ಲಿ ಘಟನೆ ನಡೆದಿದೆ.

ಕಾರ್ತಿಕ್ ಎಸ್ (19) ಮೃತಪಟ್ಟ ದುರ್ಧೈವಿಯಾಗಿದ್ದಾನೆ. ಇಂದು ಬೆಳಗಿನಜಾವ ಮನೆ ಮುಂಭಾಗದಲ್ಲಿರುವ IBx ಬೇಲಿಯ ಬಳಿಯಲ್ಲಿ ಮೂತ್ರ ವಿಸರ್ಜನೆ ಮಾಡುವಾಗ ಘಟನೆ ಸಂಭವಿಸಿದೆ.

ಏಕಾಏಕಿ ವಿದ್ಯುತ್ ಪ್ರವಹಿಸಿ ಬೇಲಿಯ ಮೇಲೆ ಬಿದ್ದಿದ್ದಾನೆ. ತಕ್ಷಣ ಆತನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದರೂ ಪ್ರಯೋಜನವಾಗದೆ ಯುವಕ ಪ್ರಾಣ ಬಿಟ್ಟಿದ್ದಾನೆ.

ಮನೆಯ ಮುಂಭಾಗದ ಬೇಲಿಯ ಮೇಲೆ ವಿದ್ಯುತ್ ತಂತಿ ತುಂಡಾಗಿ ಬಿದ್ದಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ. ಕಾರ್ತಿಕ್ ರಿಪ್ಪನ್ ಪೇಟೆಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಥಮ ಬಿಬಿಎ ವ್ಯಾಸಾಂಗ ಮಾಡುತಿದ್ದರು.

ಸ್ಥಳಕ್ಕೆ ರಿಪ್ಪನ್‌ಪೇಟೆ ಪಿಎಸ್‌ಐ ಪ್ರವೀಣ್ ಹಾಗೂ ಮೆಸ್ಕಾಂ ಸಿಬ್ಬಂದಿಗಳು ಆಗಮಿಸಿ ತನಿಖೆ ಆರಂಭಿಸಿದ್ದಾರೆ.

ಇದನ್ನೂ ಓದಿ-https://suddilive.in/archives/19068

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ