ಶನಿವಾರ, ಜುಲೈ 27, 2024

ರೈಲಿಗೆ ಸಿಲುಕಿ ಮಹಿಳೆ ಸಾವು



ಸುದ್ದಿಲೈವ್/ಶಿವಮೊಗ್ಗ


ನಗರದ ರೈಲ್ವೆ ಹಳಿಯ ಪಕ್ಕದಲ್ಲಿ  ಮಹಿಳೆಯೊಬ್ಬರ ಮೃತದೇಹ ಪತ್ತೆಯಾಗಿದೆ. ಶಿವಮೊಗ್ಗ ಸಿಟಿಯ ಸವಳಂಗ ರೋಡ್‌ನಲ್ಲಿ ಈ ಘಟನೆ ನಡೆದಿದೆ. 


ಸ್ಥಳಕ್ಕೆ ಪೊಲೀಸರು ತೆರಳಿ ಪರಿಶೀಲನೆ ನಡೆಸಿದ್ದಾರೆ. ಇಲ್ಲಿ ಸೇತುವೆ ಬಳಿ ಕೃಷಿನಗರಕ್ಕೆ ಹೋಗುವ ದಾರಿಯಲ್ಲಿ ಮಹಿಳೆಯ ಮೃತದೇಹ ಪತ್ತೆಯಾಗಿದೆ. ಮೃತದೇಹವನ್ನು ಕಂಡ ಸ್ಥಳೀಯರು ಪೊಲೀಸರಿಗೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸ್ತಿದ್ದಾರೆ. 


ರೈಲಿಗೆ ಸಿಲುಕಿ ಮಹಿಳೆ ಸಾವು



ರೈಲಿಗೆ ಸಿಲುಕಿ ಮಹಿಳೆ ಸಾವು ಕಂಡಿರುವ ಬಗ್ಗೆ ರೈಲ್ವೆ ಪೊಲೀಸರು ಸ್ಪಷ್ಟಪಡಿಸಿದ್ದಾರೆ. ಮೃತದೇಹದ ಬಗ್ಗೆ ಯಾವುದೇ ಗುತು ಪತ್ತೆಯಾಗಿಲ್ಲ. 42-45 ವಯಸ್ಸಿನ ಮಹಿಳೆ ಎಂದು ಹೇಳಲಾಗುತ್ತಿದೆ. ಬೆಳಗ್ಗಿನ ಜಾವ 4-5 ಗಂಟೆಗೆ ಈ ಘಟನೆ ನಡೆದಿದೆ ಎನ್ನಲಾಗಿದೆ. ಮಹಿಳೆಯ ನಿರ್ವಸ್ತ್ರಗೊಂಡಿರುವ  ಬಗ್ಗೆ ಇಲಾಖೆ ಸ್ಪಷ್ಟಪಡಿಸಿಲ್ಲ.


ತಾಳಿ ಗುಂಡು, ಮತ್ತು ಚೂಡಿದಾರ ಧರಿಸಿತುವುದಾಗಿ ರೈಲ್ವೆ ಪೊಲೀಸರು ಸ್ಪಷ್ಟಪಡಿದ್ದಾರೆ.


ಇದನ್ನೂ ಓದಿ-https://www.suddilive.in/2024/07/blog-post_361.html

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ