ಬುಧವಾರ, ಜುಲೈ 24, 2024

ಮಳೆಗೆ ಮನೆಯ ಮೇಲೆ ಉರುಳಿದ ಬೃಹದಾಕಾರದ ಮರ

ಮರ ಬಿದ್ದು ಮನೆಯ ಹೆಂಚು ಪುಡಿ ಪುಡಿ


ಸುದ್ದಿಲೈವ್/ಸೊರಬ


ಬಿರುಸಿನ ಗಾಳಿ ಮಳೆಗೆ ಬೃಹತ್ ಗಾತ್ರದ ಮರವೊಂದು ಉರುಳಿ ಬಿದ್ದ  ಪರಿಮಾಣ ಮನೆಯೊಂದು ಸಂಪೂರ್ಣ ಹಾನಿಗೊಳಗಾದ ಘಟನೆ ತಾಲೂಕಿನ ಗುಡವಿ ಗ್ರಾಮದ ಡಾ.ಬಿ.ಆರ್. ಅಂಬೇಡ್ಕರ್ ನಗರದಲ್ಲಿ ಮಂಗಳವಾರ ರಾತ್ರಿ ನಡೆದಿದೆ.


ಗ್ರಾಮದ ವಿರೂಪಾಕ್ಷಪ್ಪ ಈರಪ್ಪ ಎಂಬುವವರ ಮನೆಯ ಪಕ್ಕದ ಬೃಹತ್ ಗಾತ್ರದ ಹುಣಸೇ ಮರ ಮನೆಯ ಉರುಳಿದೆ. ಮನೆಯ ಮೇಲೆ ಮರ ಬಿದ್ದಿದ್ದರಿಂದ ವಿರೂಪಾಕ್ಷಪ್ಪ ಹಾಗೂ ಅವರ ಪತ್ನಿ ಮತ್ತು ಪುತ್ರಿಗೆ ಸಣ್ಣಪುಟ್ಟ ಗಾಯಗಳಾಗಿದೆ. ಮನೆಯಲ್ಲಿ ವಾಸವಿದ್ದ ಆರು ಜನರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. 


ಮರ ಮನೆಯ ಮೇಲೆ ಬಿದ್ದ ಪರಿಣಾಮ ಮನೆಯಲ್ಲಿನ ಪೀಠೋಪಕರಣಗಳು, ಗೃಹ ಉಪಯೋಗಿ ಸಾಮಗ್ರಿಗಳು, ಮನೆಯ ಮೇಲ್ಛಾವಣಿ, ಪಿಕಾಸಿ ಹಂಚುಗಳಿಗೆ ಸಾಕಷ್ಟು ಹಾನಿಯಾಗಿದೆ. 



ಸ್ಥಳಕ್ಕೆ ಗ್ರಾಪಂ ಸದಸ್ಯ ಸಿ.ಎಚ್. ಮಂಜುನಾಥ್ ಹಾಗೂ ಮಾಜಿ ಸದಸ್ಯ ಗಂಗಾಧರ ಗೌಡ ಭೇಟಿ ನೀಡಿ, ಸರ್ಕಾರದಿಂದ ದೊರೆಯಬಹುದಾದ ಸೌಲಭ್ಯ ಮತ್ತು ಪರಿಹಾರವನ್ನು ದೊರಕಿಸಿಕೊಡಲು ಪ್ರಾಮಾಣಿಕವಾಗಿ ಯತ್ನಿಸುವುದಾಗಿ ತಿಳಿಸಿದರು. 


ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಗ್ರಾಪಂ ಆಡಳಿತಾಧಿಕಾರಿ, ಗ್ರಾಮ ಲೆಕ್ಕಿಗರು ಸೇರಿದಂತೆ ಕಂದಾಯ ಇಲಾಖೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಇದನ್ನೂ ಓದಿ-https://www.suddilive.in/2024/07/blog-post_138.html

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ