ನಾಳೆ ಸೊರಬ, ತೀರ್ಥಹಳ್ಳಿಗೆ ಗೃಹ ಸಚಿವರ ಪ್ರವಾಸ

ಸುದ್ದಿಲೈವ್/ಶಿವಮೊಗ್ಗ

ಕರ್ನಾಟಕ ರಾಜ್ಯ ಗೃಹ ಸಚಿವರಾದ ಡಾ. ಜಿ. ಪರಮೇಶ್ವರರವರು ದಿ: 13/07/2024 ರಂದು ಜಿಲ್ಲೆಯ ಸೊರಬ ಮತ್ತು ತೀರ್ಥಹಳ್ಳಿ ತಾಲೂಕುಗಳಿಗೆ ಭೇಟಿ ನೀಡಿ ವಿವಿಧ ಕಾಮಾಗಾರಿಗಳ ಉದ್ಘಾಟನಾ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.

ಅಂದು ಮಧ್ಯಾಹ್ನ 12.30ಕ್ಕೆ ಸೊರಬದಲ್ಲಿ ನೂತನವಾಗಿ ನಿರ್ಮಾಣ ಮಾಡಿರುವ ಪೊಲೀಸ್ ವಸತಿಗೃಹಗಳ ಸಮುಚ್ಛಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಮಧ್ಯಾಹ್ನ 3.45 ರಿಂದ 4.15ರವರೆಗೆ ತೀರ್ಥಹಳ್ಳಿಯಲ್ಲಿ ನೂತನವಾಗಿ ನಿರ್ಮಾಣ ಮಾಡಿರುವ ಪೊಲೀಸ್ ಠಾಣಾ ಕಟ್ಟಡ, ಪೊಲೀಸ್ ವಸತಿಗೃಹಗಳ ಸಮುಚ್ಛಯ ಮತ್ತು ನೂತನ ಅಗ್ನಿಶಾಮಕ ಠಾಣಾ ಕಟ್ಟಡದ ಉದ್ಘಾಟನಾ ಸಮಾರಂಭಗಳಲ್ಲಿ ಭಾಗವಹಿಸಲಿದ್ದಾರೆ.

ಸಂಜೆ 4.15ಕ್ಕೆ ರಸ್ತೆ ಮೂಲಕ ಬೆಂಗಳೂರಿಗೆ ವಾಪಾಸ್ಸಾಗಲಿದ್ದಾರೆ ಎಂದು ಸಚಿವರ ವಿಶೇಷ ಕರ್ತವ್ಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಇದನ್ನೂ ಓದಿ-https://suddilive.in/archives/19080

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close