ಸುದ್ದಿಲೈವ್/ಶಿವಮೊಗ್ಗ
ಹಲವು ದಶಕಗಳಿಂದ ಮುದ್ರಣ ಕ್ಷೇತ್ರದಲ್ಲಿ ತೊಡಗಿದ್ದ ವಿಶ್ವನಾಥ ಕಾಶಿ ಇಂದು ಮುಂಜಾನೆ ನಿಧನರಾಗಿದ್ದಾರೆ. ಕೆಲ ದಿನಗಳ ಹಿಂದೆ ಆನಾರೋಗ್ಯಕ್ಕೆ ಗುರಿಯಾಗಿದ್ದ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಊರಗಡೂರು ವಿನಾಯಕ ಸ್ವಾಮಿ ದೇವಾಲಯದ ರಸ್ತೆಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಇಂದು ಮಧ್ಯಾಹ್ನ 12ಗಂಟೆ ರೋಟರಿ ಚಿತಾಗಾರದಲ್ಲಿ ಅಂತಿಮ ಸಂಸ್ಕಾರ ನಡೆಯಲಿದೆ.
ಪತ್ರಕರ್ತೆ ಪದ್ಮಿನಿ ಹಾಗೂ ಇಬ್ಬರು ಮಕ್ಕಳು ಮತ್ತು ಅಪಾರ ಬಂಧು ಬಳಗ ಕಾಶಿ ಅವರಿಗೆ ಇದೆ.
ಪತ್ರಿಕೆಗಳ ಮಿತ್ರ ಕಾಶಿ
ರಾಜ್ಯ ಮಟ್ಟದ ಪತ್ರೊಕೆಗಳ ಪ್ರಿಂಟಿಂಗ್ ವಿಭಾಗದಲ್ಲಿ ಕೆಲಸ ಮಾಡಿದ್ದ ಕಾಶಿ ಸ್ವಂತ ಪ್ರಿಂಟಿಂಗ್ ಪ್ರೆಸ್ ಆರಂಭಿಸಿದ್ದರು. ಪ್ರಾದೇಶಿಕ, ಜಿಲ್ಲಾ ಮಟ್ಟದ ಹಲವಾರು ಪತ್ರಿಕೆಗಳಿಗೆ ಮುದ್ರಕರಾಗಿದ್ದರು. ಮುದ್ರಣ ಯಂತ್ರದಲ್ಲಿ ಯಾವುದೋ ದೋಷ ಕಂಡು ಬಂದರೂ ಅದನ್ನು ಪರಿಹರಿಸುವಲ್ಲಿ ನಿಸ್ಸೀಮರಾಗಿದ್ದರು. ಅವರ ನಿಧನ ಶಿವಮೊಗ್ಗ ಮಾಧ್ಯಮ ಲೋಕಕ್ಕೆ ಅಪಾರ ನಷ್ಟವಾಗಿದೆ.
ಕಾರ್ಯನಿರತ ಪತ್ರಕರ್ತರ ಸಂಘದ ಶಿವಮೊಗ್ಗ ಜಿಲ್ಲಾ ಅಧ್ಯಕ್ಷ ಕೆ.ವಿ. ಶಿವಕುಮಾರ್, ರಾಜ್ಯ ಸಮಿತಿ ಸದಸ್ಯ ರವಿಕುಮಾರ್ ಹಾಗೂ ಪದಾಧಿಕಾರಿಗಳು ವಿಶ್ವನಾಥ ಕಾಶಿ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.
ಇದನ್ನೂ ಓದಿ-https://www.suddilive.in/2024/07/50.html
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ