ಸುದ್ದಿಲೈವ್/ಶಿವಮೊಗ್ಗ
ಕಾಂಗ್ರೆಸ್ ಸರ್ಕಾರ ಪಾರದರ್ಶಕ ಆಡಳಿತ ನೀಡುತ್ತಿದೆ.ಯಾವುದೇ ಹಗರಣಗಳ ಸಂದರ್ಭದಲ್ಲಿ ಕಠಿಣ ಕ್ರಮ ತೆಗೆದುಕೊಂಡಿದ್ದೇವೆ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ತಿಳಿಸಿದರು.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ವಾಲ್ಮೀಕಿ ಹಗರಣದ ವಿಚಾರದಲ್ಲಿ ಎಸ್‌ಐಟಿ ರಚನೆ ಮಾಡಲಾಗಿದೆ. ಎಸ್ಐಟಿ ನಿಷ್ಪಕ್ಷಪಾತ ತನಿಖೆ ನಡೆಸುತ್ತಿದೆ. ಇಷ್ಟೆಲ್ಲದರ ಮಧ್ಯೆ ಕೇಂದ್ರದ ತನಿಖಾ ಸಂಸ್ಥೆಗಳು ಮಧ್ಯಪ್ರವೇಶ ಮಾಡುತ್ತಿರುವುದು ಎಷ್ಟರಮಟ್ಟಿಗೆ ಸರಿ ಎಂದು ಪ್ರಶ್ನಿಸಿದರು.
ಅಭಿವೃದ್ಧಿಗೆ ಹಣಕಾಸಿನ ಕೊರತೆ ಇಲ್ಲ ಎಂದು ಸಿಎಂ ಹೇಳಿದ್ದಾರೆ. ಆದರೆ ಸಿಎಂ ಆರ್ಥಿಕ ಸಲಹೆಗಾರ ಹಾಗೂ ಶಾಸಕ ಬಸವರಾಜ ರಾಯರೆಡ್ಡಿ, ಅಭಿವೃದ್ಧಿಗೆ ಸರ್ಕಾರದ ಬಳಿ ಹಣವಿಲ್ಲ. ಗ್ಯಾರೆಂಟಿಗೆ ಎಲ್ಲ ಹೋಗ್ತಾ ಇದೆ ಎಂಬ ಹೇಳಿಕೆ ನೀಡಿರುವ ಬಗ್ಗೆ ಉತ್ತರಿಸಿರುವ ಈಶ್ವರ್ ಖಂಡ್ರೆ, ಬಸವರಾಜ್ ರಾಯರೆಡ್ಡಿ ಯಾವ ಕಾಂಟೆಸ್ಟ್ ನಲ್ಲಿ ಹೇಳಿದ್ದಾರೆ ಗೊತ್ತಿಲ್ಲ. ಬಿಜೆಪಿಯವರು ಸುಳ್ಳೇ ಸತ್ಯ ಎಂದು ಬಿಂಬಿಸುತ್ತಾರೆ ಸುಳ್ಳು ಹೇಳುವುದರಲ್ಲಿ ನಿಸ್ಸೀಮರಾಗಿದ್ದಾರೆ ಎಂದು ದೂರಿದರು.
ಎಸ್ ಐ ಟಿ ಅಧಿಕಾರಿಗಳನ್ನೇ ತನಿಖೆ ಮಾಡಬೇಕೆಂದು ಆರಗ ಜ್ಞಾನೇಂದ್ರ ನೀಡಿರುವ ಹೇಳಿಕೆಗೂ ಪ್ರತಿಕ್ರಿಯಿಸಿದ ಸಚಿವರು, ಬಿಜೆಪಿ ಅಧಿಕಾರವಧಿಯಲ್ಲಿ ಒಂದೇ ಒಂದು ಪ್ರಕರಣ ಸಿಬಿಐ ತನಿಖೆಗೆ ಕೊಡಲಿಲ್ಲ. ಆರಗ ಜ್ಞಾನೇಂದ್ರ ಹೇಳಿಕೆಗೆ ಯಾವುದೇ ಬೆಲೆ ಇಲ್ಲ ಎಂದರು.
ಇದನ್ನೂ ಓದಿ-https://suddilive.in/archives/19038
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ