ಮಂಗಳವಾರ, ಆಗಸ್ಟ್ 13, 2024

ನಗರದಲ್ಲಿ ಆ.14 ಗ್ರಾಮಾಂತರ ಭಗದಲ್ಲಿ ನಿರಂತರ ಮೂರು ದಿನ ವಿದ್ಯುತ್ ವ್ಯತ್ಯಯ



ಸುದ್ದಿಲೈವ್/ಶಿವಮೊಗ್ಗ


ಕಾಮಗಾರಿ ನಿಮಿತ್ತ ಆ.14 ರಂದು ನಗರ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯವಾದರೆ, ಲಿಂಕ್ ಲೈನ್ ಕಾಮಗಾರಿ ನಿಮಿತ್ತ  ಆ.16 ರಿಂದ 18 ರವರೆಗೆ ಗ್ರಾಮಾಂತರ ಭಾಗದಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. 


ನಗರ ಉಪವಿಭಾಗ-2ರ ಮಂಡ್ಲಿ ವಿ ವಿ ವ್ಯಾಪ್ತಿಯಲ್ಲಿ ತುರ್ತು ನಿರ್ವಹಣೆ 11 ಕೆವಿ ಕಾಮಗಾರಿ ಇರುವುದರಿಂದ ಆ. 14ರಂದು ಬೆಳಗ್ಗೆ 9.00 ರಿಂದ ಸಂಜೆ 6.00 ರವರೆಗೆ ಗೋಪಿಶೆಟ್ಟಿಕೊಪ್ಪ, ಜಿ.ಎಸ್.ಕ್ಯಾಸ್ಟಿಂಗ್ ಫ್ಯಾಕ್ಟರಿ, ಇಲಿಯಾಜ್‌ನಗರ 1 ರಿಂದ 13ನೇ ಕ್ರಾಸ್‌ವರೆಗೆ, ಸಿದ್ದೇಶ್ವರ ಸರ್ಕಲ್, ಫಾರೂಕ್ಯ ಶಾದಿಮಹಲ್, ತುಂಗಾನಗರ ಆಸ್ಪತ್ರೆ, ವೈಷ್ಣವಿ ಲೇಔಟ್, ಭವಾನಿ ಲೇಔಟ್, ಗದ್ದೇಮನೆ ಲೇಔಟ್, ಚಾಲುಕ್ಯನಗರ, ಕೆಹೆಚ್‌ಬಿ ಕಾಲೋನಿ, ಮಂಡಕ್ಕಿ ಭಟ್ಟಿ, ಮೇಲಿನ ಮತ್ತು ಕೆಳಗಿನ ತುಂಗಾನಗರ, ಟಿಪ್ಪುನಗರ, ಮಂಜುನಾಥ ಬಡಾವಣೆ, ಖಾಜಿನಗರ 80 ಅಡಿರಸ್ತೆ, ಕಾಮತ್ ಲೇಔಟ್, ಹಳೇ ಗೋಪಿಶೆಟ್ಟಿಕೊಪ್ಪ, ಅಣ್ಣಾನಗರ, ಮಲ್ಲಿಕಾರ್ಜುನ ಬಡಾವಣೆ, ಮಂಜುನಾಥ ಬಡಾವಣೆ, ಮಿಳಘಟ್ಟ, ಆನಂದರಾವ್ ಬಡಾವಣೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳು, ಸೀಗೆಹಟ್ಟಿ, ರವಿವರ್ಮ ಬೀದಿ, ಬಿ.ಬಿ.ರಸ್ತೆ, ಓ.ಟಿ.ರಸ್ತೆ, ಭಾರತಿಕಾಲೋನಿ, ಪಂಚವಟಿ ಕಾಲೋನಿ, ಅಮೀರ್ ಅಹ್ಮದ್ ಸರ್ಕಲ್, ಕೃಷಿ ಕಚೇರಿ, ಮಾಕಮ್ಮ ಬೀದಿ, ಕೆರೆದುರ್ಗಮ್ಮನಕೇರಿ, ಪುಟ್ಟನಂಜಪ್ಪ ಕೇರಿ, ಅಜಾದ್‌ನಗರ, ಕಲಾರ್ ಪೇಟೆ, ಸಿದ್ದಯ್ಯ ರಸ್ತೆ, ಇಮಾಮ್ ಬಡಾ, ಮುರಾದ್‌ನಗರ, ಕ್ರೌನ್ ಪ್ಯಾಲೇಸ್ ಶಾದಿ ಮಹಲ್, ತಾಹಾ ಶಾದಿಮಹಲ್, ಮಂಡಕ್ಕಿಭಟ್ಟಿ ಏರಿಯಾ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ. 


ಮೂರು ದಿನ ನಿರಂತರ ವ್ಯತ್ಯಯ


ಶಿವಮೊಗ್ಗ ಹೊಳಲೂರು  66/11 ಕೆ.ವಿ. ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ವಿದ್ಯುತ್ ಮಾರ್ಗಗಳ ಲಿಂಕ್‌ಲೈನ್ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಆ. 16   ರಿಂದ 18 ರವರೆಗೆ 3 ದಿನಗಳ ಕಾಲ ಬೆಳಗ್ಗೆ 10.00 ರಿಂದ ಸಂಜೆ 6.00ರವರೆಗೆ ಹಾಡೋನಹಳ್ಳಿ, ಹಳೆ/ಹೊಸ ಮಡಿಕೆಚೀಲೂರು, ಬಿ.ಕೆ.ತಾವರೆ ಗ್ರಾಮಗಳ ವ್ಯಾಪ್ತಿಯಲ್ಲಿ ಬರುವ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ