ಬುಧವಾರ, ಆಗಸ್ಟ್ 14, 2024

ಸ್ವಾತಂತ್ರ್ಯೋತ್ಸವ ನಿಮಿತ್ತ ಈಸೂರಿಗೆ ಬೈಕ್ ರ್ಯಾಲಿ



ಸುದ್ದಿಲೈವ್/ಸೊರಬ


ಸಾರ್ವಜನಿಕ ಹಿತರಕ್ಷಣಾ ಹೋರಾಟ ಸಮಿತಿ ವತಿಯಿಂದ ಆ.15ರಂದು ಪಟ್ಟಣದಿಂದ ಶಿಕಾರಿಪುರ ತಾಲೂಕಿನ ಈಸೂರಿನವರೆಗೆ ಬೈಕ್ ರ್ಯಾಲಿ ಹಮ್ಮಿಕೊಳ್ಳಲಾಗಿದೆ ಎಂದು ಸಮಿತಿಯ ಅಧ್ಯಕ್ಷ ಜೆ.ಎಸ್. ಚಿದಾನಂದಗೌಡ ತಿಳಿಸಿದ್ದಾರೆ. 


ದೇಶದಲ್ಲಿಯೇ ಮೊದಲ ಸ್ವಾತಂತ್ರ್ಯ ಗ್ರಾಮವಾದ ಈಸೂರಿನಲ್ಲಿ ಈ ಬಾರಿ ಸ್ವಾತಂತ್ರ್ಯೋತ್ಸವದಲ್ಲಿ ಪಾಲ್ಗೊಳ್ಳುವ ಜೊತೆಗೆ ಸ್ವಾತಂತ್ರ್ಯ ಯೋಧರ ಸ್ಮಾರಕಕ್ಕೆ ನಮನ ಸಲ್ಲಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಅಂದು ಬೆಳಗ್ಗೆ 5ಗಂಟೆಗೆ ಪಟ್ಟಣದ ಶ್ರೀರಂಗನಾಥ ದೇವಸ್ಥಾನದ ಮುಂಭಾಗದಿಂದ ಹೊರಟು ಶಿರಾಳಕೊಪ್ಪ, ಶಿಕಾರಿಪುರ ಮಾರ್ಗವಾಗಿ ಈಸೂರು ಗ್ರಾಮವನ್ನು ತಲುಪಲಾಗುವುದು. ದೇಶದ ಸ್ವಾತಂತ್ರ್ಯಕ್ಕಾಗಿ ತ್ಯಾಗ ಬಲಿದಾನ ಮಾಡಿದ ಹುತಾತ್ಮರಿಗೆ ನಮನ ಸಲ್ಲಿಸುವ ಉದ್ದೇಶದಿಂದ ಬೈಕ್ ರ್ಯಾಲಿ ಹಮ್ಮಿಕೊಳ್ಳಲಾಗಿದೆ. 


ಕಾರ್ಯಕ್ರಮದಲ್ಲಿ ಸಾರ್ವಜನಿಕರು, ವಿದ್ಯಾರ್ಥಿಗಳು ಹಾಗೂ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಸ್ವಯಂ ಪ್ರೇರಿತರಾಗಿ ಆಗಮಿಸಬೇಕಾಗಿ ಕೋರಿದ್ದಾರೆ. 

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ