ಶುಕ್ರವಾರ, ಆಗಸ್ಟ್ 16, 2024

ಜಿಲ್ಲೆಯ ಪ್ರಮುಖ ನದಿಗಳ ಜಲಾಶಯದ ನೀರಿನ ಮಟ್ಟ

 


ಸುದ್ದಿಲೈವ್/ಶಿವಮೊಗ್ಗ


ಶಿವಮೊಗ್ಗದ ಪ್ರಮುಖ ನದಿಗಳ ಜಲಾಶಯದ ಒಳ ಹರಿವು ಹೆಚ್ಚಾಗಿದೆ.


ಲಿಂಗನಮಕ್ಕಿ ಜಲಾಶಯಕ್ಕೆ ಇವತ್ತು 7643 ಕ್ಯೂಸೆಕ್‌ ಒಳ ಹರಿವು ಇದೆ. ಹಾಗಾಗಿ 7504 ಕ್ಯೂಸೆಕ್‌ ನೀರನ್ನು ಹೊರ ಬಿಡಲಾಗುತ್ತಿದೆ. ಜಲಾಶಯದ ನೀರಿನ ಮಟ್ಟ 1816.85 ಅಡಿಗೆ ತಲುಪಿದೆ. ಇನ್ನು, ಜಲಾಶಯವು 151.64 ಟಿಎಂಸಿ ಸಂಗ್ರಹ ಸಾಮರ್ಥ್ಯ ಹೊಂದಿದ್ದು, ಇವತ್ತು 144.50 ಟಿಎಂಸಿ ನೀರು ಸಂಗ್ರಹವಾಗಿದೆ.


ತುಂಗಾ ಜಲಾಶಯದ ಒಳ ಹರಿವು ತುಸು ಏರಿಕೆಯಾಗಿದೆ. ಇವತ್ತು 10,969 ಕ್ಯೂಸೆಕ್‌ ಒಳ ಹರಿವು ಇದೆ. ಜಲಾಶಯ ಭರ್ತಿ ಆಗಿರುವುದರಿಂದ ಒಳ ಹರಿವಿನಷ್ಟೆ ಪ್ರಮಾಣದ ನೀರನ್ನು ಹೊಳೆಗೆ ಹರಿಸಲಾಗುತ್ತಿದೆ. ಇದರಿಂದ ಶಿವಮೊಗ್ಗದಲ್ಲಿ ತುಂಗಾ ನದಿಯಲ್ಲಿ ನೀರಿನ ಹರಿವು ಮುಂದುವರೆದಿದೆ.


ಭದ್ರಾ ಜಲಾಶಯಕ್ಕೂ ಉತ್ತಮ ಒಳ ಹರಿವು ಇದೆ. ಇವತ್ತು 8419 ಕ್ಯೂಸೆಕ್‌ ಒಳ ಹರಿವು ಇದೆ. 7841 ಕ್ಯೂಸೆಕ್‌ ನೀರನ್ನು ಹೊರಬಿಡಲಾಗುತ್ತಿದೆ. ಜಲಾಶಯದ ನೀರಿನ ಮಟ್ಟ 180.2 ಅಡಿ ಇದೆ. ಪ್ರಸ್ತುತ ಜಲಾಶಯದಲ್ಲಿ 64.37 ಟಿಎಂಸಿ ನೀರು ಸಂಗ್ರಹವಾಗಿದೆ.‌

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ