ಮಂಗಳವಾರ, ಆಗಸ್ಟ್ 6, 2024

ಕೆಎಸ್ಆರ್ ಟಿಸಿ ಬಸ್ ನಲ್ಲಿ ಕಾಣಿಸಿಕೊಂಡ ಬೆಂಕಿ



ಸುದ್ದಿಲೈವ್/ಸಾಗರ


ಸಾಗರದಲ್ಲಿ ವಾಯುವ್ಯ ಕರ್ನಾಟಕ ಸಾರಿಗೆ ಸಂಸ್ಥೆಗೆ ಸೇರಿದ ಬಸ್ಸಿನಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡು ಬಸ್ ಹೊತ್ತಿ ಉರಿದಿದೆ. 


ಭಟ್ಕಳದಿಂದ ಬೆಂಗಳೂರಿಗೆ ಹೊರಟಿದ್ದ ಬಸ್ಸಿನಲ್ಲಿ 14 ಜನ ಪ್ರಯಾಣಿಕರು ಪ್ರಯಾಣಿಸುತ್ತಿದ್ದರು ಎಂದು ತಿಳಿದು ಬಂದಿದೆ. ಪ್ರಯಾಣಿಜರಿಗೆ ಯಾವುದೇ ಹಾನಿ ಉಂಟಾಗಿಲ್ಲ ಎಂದು ಹೇಳಲಾಗುತ್ತಿದೆ. 


ಭಟ್ಕಳ ಘಟಕದ ವಾಹನ ಸಾಗರದ ಎಲ್ ಬಿ ಕಾಲೇಜು ಬಳಿ ಬೆಂಕಿ ಅವಘಡ ಆಗಿರುತ್ತದೆ. ಬೆಂಕಿ ಅವಘಡಕ್ಕೆ ಕಾರಣ ತಿಳಿದು ಬಂದಿಲ್ಲ. ಅಗ್ನಿಶಾಮಕ ದಳದವರು ಆಗಮಿಸಿ ಬೆಂಕಿ ನಂದಿಸಿದ್ದಾರೆ. 


ಇದನ್ನೂ ಓದಿ-https://www.suddilive.in/2024/08/blog-post_25.html

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ