ನಾನು ಸಚಿವಸ್ಥಾನದ ಆಕಾಂಕ್ಷಿಯಲ್ಲ-ಬೇಳೂರು



ಸುದ್ದಿಲೈವ್/ಶಿವಮೊಗ್ಗ


ಕಳೆದ ವರ್ಷ ಬರಗಾಲ ಇತ್ತು. ಈ ಬಾರಿ ಉತ್ತಮವಾಗಿ ಮಳೆಯಾಗುತ್ತಿದೆ. ಕಳೆದ ವರ್ಷ ಕುಡಿಯುವ ನೀರಿನ‌ ಪೂರೈಯ ಬಗ್ಗೆ ಆತಂಕ ಇತ್ತು. ಈ ವರ್ಷ ಲಿಂಗನಮಕ್ಕಿ ಜಲಾಶಯ ಭರ್ತಿಯಾಗಿ ನದಿಗೆ ನೀರು ಹರಿಸಲಾಗಿದೆ ಎಙದು ಶಾಸಕ ಹಾಗೂ ಕರಗನಾಟಕ ರಾಜ್ಯ ಅರಣ್ಯ ಕೈಗಾರಿಕೆ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ತಿಳಿಸಿದರು. 


ಕಾರ್ಗಲ್ ನಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು,  ಆದರೆ ಈ ಬಾರಿ ಆ ಆತಂಕ‌ ಇಲ್ಲ. ಚೆನ್ನಾಗಿ ಮಳೆಯಾದ ಹಿನ್ನೆಲೆಯಲ್ಲಿ ಸಾಕಷ್ಟು ಹಾನಿಯಾಗಿದೆ. ಈ ಬಾರಿ ಮೂರು ಕ್ರಸ್ಟ್‌ ಗೇಟ್ ಮೂಲಕ ಶರಾವತಿ ನದಿಗೆ 10 ಸಾವಿರ ಕ್ಯೂಸೆಕ್ ನೀರು ಹರಿಸಲಾಗಿದೆ. ೧ ಲಕ್ಷ ಕ್ಯೂಸೆಕ್ ನೀರು ಬಿಟ್ಟರೆ ನದಿಪಾತ್ರದ ಸುಮಾರು 2 ಸಾವಿರ ಮನೆಗಳು ಮುಳುಗುವ ಸಾಧ್ಯತೆ ಇದೆ ಎಂದು ಆತಂಕವ್ಯಕ್ತಪಡಿಸಿದರು. 


ಒಳ‌ ಹರಿವು ನೋಡಿಕೊಂಡು ನೀರು ಹರಿಸಲಾಗುತ್ತದೆ. ಜೋಗ ಜಲಾಶಯದ ಬಳಿ ಪ್ರವಾಸೋದ್ಯಮ‌ ಅಭಿವೃದ್ಧಿಗೆ ಒತ್ತು ನೀಡಲಾಗುತ್ತದೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೇವಲ ಯೋಜನೆ ರೂಪಿಸಲಾಗಿತ್ತು. ಆದರೆ ಯಾವುದೇ ಹಣ ಮಂಜೂರು ಆಗಿರಲಿಲ್ಲ. ನಮ್ಮ ಕಾಂಗ್ರೆಸ್ ಸರ್ಕಾರ‌ ಅಧಿಕಾರಕ್ಕೆ ಬಂದ ನಂತರ 30 ಕೋಟಿ ಬಿಡುಗಡೆ ಆಗಿದೆ ಎಂದರು. 


ಜೋಗ ರಾಮೋಜಿರಾವ್ ಫಿಲ್ಮ್ ಸಿಟಿ ರೀತಿ ಅಭಿವೃದ್ಧಿ


ಜೋಗವನ್ನ ರಾಮೋಜಿರಾವ್ ಫಿಲ್ಮ್ ಸಿಟಿ ಮಾದರಿ ಅಭಿವೃದ್ಧಿ ಪಡಿಸುವ ಆಲೋಚನೆ ಇದೆ. ಇದಕ್ಕಾಗಿ ನಾನು ಕೆಲವು ಸ್ಥಳಗಳಿಗೆ ಭೇಟಿ ನೀಡಲು ನಿರ್ಧರಿಸಿದ್ದೇನೆ. ಜೋಗದ ಅಭಿವೃದ್ಧಿಯಿಂದ ಪರಿಸರಕ್ಕೆ ಯಾವುದೇ ಹಾನಿ ಆಗುವುದಿಲ್ಲ. ಪರಿಸರಕ್ಕೆ ಹಾನಿ ಆಗದ ರೀತಿಯಲ್ಲಿ ಅಭಿವೃದ್ಧಿ ಮಾಡಲಾಗುವುದು ಎಂದರು. 


ಇನ್ನೊಂದು ವರ್ಷದಲ್ಲಿ ಈ ಯೋಜನೆ ಪೂರ್ಣಗೊಳ್ಳುವ ಸಾಧ್ಯತೆ ಇದೆ. ಪ್ರವಾಸಿಗರಿಗೆ ಯಾವುದೇ ರೀತಿಯ ತೊಂದರೆ ಆಗದಂತೆ ಕ್ರಮ ವಹಿಸಲಾಗುತ್ತದೆ. ಆಗುಂಬೆ ಘಾಟಿಯ ಬಳಿ‌ ಟನಲ್ ನಿರ್ಮಾಣ ಪ್ರಸ್ತಾಪ ಸರಿ ಇದೆ. ಇದರಿಂದ ಘಾಟಿ ಕುಸಿತದಂತಹ  ಪ್ರಕರಣ ತಪ್ಪುತ್ತದೆ. ಪರಿಸರಕ್ಕೆ ಧಕ್ಕೆ ಆಗದ ರೀತಿಯಲ್ಲಿ ತನ್ನ ಕೆಲಸ ಆಗಬೇಕಿದೆ ಎಂದರು. 


ಪಾದಯಾತ್ರೆ ಗಿಮಿಕ್


ಮೂಡಾ ಹಾಗು ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ವಿರುದ್ಧ ಬಿಜೆಪಿಯ ಪಾದಯಾತ್ರೆಯ ಕುರಿತು ಮಾತನಾಡಿದ ಶಾಸಕರು ಬಿಜೆಪಿ ಅವರು ಪಾದಯಾತ್ರೆ ನಡೆಸುತ್ತಿರುವುದು ಒಂದು ಗಿಮಿಕ್ ಆಗಿದೆ. ಬಿಜೆಪಿಯವರಾದ ಬಸವರಾಜ್ ಪಾಟೀಲ್ ಯತ್ನಾಳ್ ಸೇರಿದಂತೆ ಅನೇಕರು ವಾದಯಾತ್ರೆ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಹಾಗೆ ಬಿಜೆಪಿಯ ಮೈತ್ರಿ ಪಕ್ಷವಾದ ಜೆಡಿಎಸ್ ಸಹ ಪಾದಯಾತ್ರೆಗೆ ಬೆಂಬಲ ವ್ಯಕ್ತಪಡಿಸಿಲ್ಲ ಎಂದರು


ಮೈಸೂರು ಭಾಗದಲ್ಲಿ ತಮ್ಮ ಪ್ರಾಬಲ್ಯ ಕುಗ್ಗುತ್ತದೆ ಎಂಬ ಕಾರಣಕ್ಕೆ ಜೆಡಿಎಸ್ ಈ ರೀತಿ ನಡೆದುಕೊಳ್ಳುತ್ತಿದೆ. ಹಗರಣದ ಬಗ್ಗೆ ಈಗಾಗಲೇ ತನಿಖೆ ನಡೆಯುತ್ತಿದೆ. ಹಾಗಾಗಿ ಸಿಎಂ ರಾಜೀನಾಮೆ ನೀಡುವ ಅಗತ್ಯ ಕಾಣುತ್ತಿಲ್ಲ. ಮುಖ್ಯಮಂತ್ರಿಯ ವಿರುದ್ಧ ವಿಚಾರಣೆಗೆ ರಾಜ್ಯಪಾಲರು ಮಾಹಿತಿ ಕೇಳಿದ್ದಾರೆ. ರಾಜ್ಯಪಾಲರಿಗೆ ಅವರದೇ ಅಧಿಕಾರ ಇದೆ ಎಂದರು. 


ನಮ್ಮ ನಿಗಮದಲ್ಲಿ ಹಣವಿಲ್ಲ


ನಾನು ಅಧ್ಯಕ್ಷನಾಗಿರುವ ಅರಣ್ಯ ಹಾಗೂ ಕೈಗಾರಿಕಾ ಉತ್ಪನ್ನ ಅಭಿವೃದ್ಧಿ ನಿಗಮದಲ್ಲಿ ಯಾವುದೇ ಹಗರಣ ನಡೆದಿಲ್ಲ. ಹಾಗೆ ನೋಡಿದರೆ ನಮಗೆ ಅನುದಾನ ಬರುವುದೇ ಇಲ್ಲ. ಸರಕಾರಿ ಸಂಸ್ಥೆಗಳಿಗೆ ಹಾಗೂ ಕಚೇರಿಗೆ ನಾವು ಪೀಠೋಪಕರಣಗಳನ್ನು ತಯಾರಿಸಿ ಪೂರೈಸುತ್ತೇವೆ.ಅವರಿಂದ ಬಂದ ಹಣವನ್ನು ನಾವು ಚಟುವಟಿಕೆಗೆ ಬಳಸಿಕೊಳ್ಳುತ್ತೇವೆ ಎಂದರು. 


ಅನುದಾನದ ಕೊರತೆಯ ನಡುವೆಯೂ ನಾವು ಒಂದು ಕೋಟಿ ರೂಪಾಯಿ ಲಾಭವನ್ನು ಸರ್ಕಾರಕ್ಕೆ ನೀಡಿದ್ದೇವೆ. ಲಿಂಗನಮಕ್ಕಿ ಜಲಾಶಯದ ಬಳಕೆ ಅವಧಿ ಮುಗಿದಿದೆ ಎಂಬ ಮಾಹಿತಿ ಇದೆ. ಆದರೆ ಕಾಲಕಾಲಕ್ಕೆ ಡ್ಯಾಮ್ ನ ದುರಸ್ತಿ ಹಾಗೂ ನಿರ್ವಹಣೆ ಆಗಬೇಕಿದ. ಹಾಗಾಗಿ ಡ್ಯಾಮ್ ನ ಸುರಕ್ಷತೆಯ ಬಗ್ಗೆ ಗಾ ಯಾವುದೇ ರೀತಿಯ ಆತಂಕ ಪಡುವ ಅಗತ್ಯ ಇಲ್ಲ ಎಂದರು. 


ಶರಾವತಿ ನೀರು ಬೆಂಗಳೂರಿಗೆ-ಕಂಡೀಷನ್ ಅಪ್ಲೆ


ಲಿಂಗನಮಕ್ಕಿಯಿಂದ ಬೆಂಗಳೂರಿಗೆ ಕುಡಿಯುವ ನೀರನ್ನು ತೆಗೆದುಕೊಂಡು ಹೋಗುವ ಪ್ರಸ್ತಾಪ ಈ ಹಿಂದೆ ಇತ್ತು.‌ ಕುಡಿಯುವ ನೀರನ್ನು ಬಳಸಿಕೊಳ್ಳಲು ನಮ್ಮ ಯಾವುದೇ ಆಕ್ಷೇಪವಿಲ್ಲ. ಏಕೆಂದರೆ ಲಿಂಗನಮಕ್ಕಿ ಜಲಾಶಯ ಯಾವುದೇ ಕೃಷಿ ಚಟುವಟಿಕೆಗೆ ಬಳಕೆಯಾಗುವುದಿಲ್ಲ. ಆದರೆ ಡ್ಯಾಮ್ ನ ನಿರ್ಮಾಣಕ್ಕಾಗಿ ಭೂಮಿಯನ್ನು ತ್ಯಾಗ ಮಾಡಿರುವ ಜನರಿಗೆ ವಿದ್ಯುತ್ ಸಂಪರ್ಕ ನೀಡಬೇಕಿದೆ ಎಂದರು.


ಸಂತ್ರಸ್ತರಿಗೆ ವಿದ್ಯುತ್ ಸಂಪರ್ಕವನ್ನು ನೀಡಿದ ನಂತರ ಕುಡಿಯುವ ನೀರನ್ನು ತೆಗೆದುಕೊಂಡು ಹೋಗಲು ನಮ್ಮ ಅಕ್ಷೇಪ ಇಲ್ಲ. ರಾಜ್ಯ ಸಚಿವ ಸಂಪುಟದಲ್ಲಿ ಬದಲಾವಣೆ ಆಗಲಿದೆ ಎಂಬ ಮಾತು ಕೇಳಿ ಬರುತ್ತಿದೆ. ಮಾಧ್ಯಮಗಳ ಮೂಲಕ ಈ ಬಗ್ಗೆ ನಾನು ಕೇಳಿದ್ದೇನೆ.‌ ಆದರೆ ನನಗೆ ಈ ಬಗ್ಗೆ ಅಧಿಕೃತವಾಗಿ ಮಾಹಿತಿ ಇಲ್ಲ. ಕೆಲವರನ್ನು ಸಂಪುಟದಿಂದ ಕೈ ಬಿಡಲಾಗುತ್ತದೆ ಎಂದು ಹೇಳಲಾಗುತ್ತಿದೆ ಎಂದರು.

ನಾನು ಆಕಾಂಕ್ಷಿಯಿಲ್ಲ

ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ. ಆದರೆ ಅವಕಾಶ ಸಿಕ್ಕರೆ ಕೆಲಸ ಮಾಡಲು ಸಿದ್ಧನಿದ್ದೇನೆ ಎಂದು ಶಾಸಕ ಬೇಲೂರು ಗೋಪಾಲಕೃಷ್ಣ ತಿಳಿಸಿದರು.


ಇದನ್ನೂ ಓದಿ-https://www.suddilive.in/2024/08/blog-post_55.html

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close