ಸಾಂಧರ್ಭಿಕ ಚಿತ್ರ |
ಸುದ್ದಿಲೈವ್/ಶಿವಮೊಗ್ಗ
ಜಿಲ್ಲೆಯ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಕಟ್ಟಡ ಕಾಮಗಾರಿ ಮತ್ತಿತರ ಕೆಲಸಗಳಲ್ಲಿ ಮೇಸ್ತ್ರಿ/ಮಾಲೀಕರು/ಗುತ್ತಿಗೆದಾರರು ಬೇರೆ ಬೇರೆ ರಾಜ್ಯದಿಂದ ಬರುವ ಕಾರ್ಮಿಕರನ್ನು ಬಳಸಿಕೊಳ್ಳುತ್ತಿದ್ದು, ಹೀಗೆ ಕೆಲಸಕ್ಕೆ ತೆಗೆದುಕೊಳ್ಳುವ ಅಂತರಾಜ್ಯ ಕಾರ್ಮಿಕರ ಆಧಾರ್ ಕಾರ್ಡ್ ಮತ್ತು ವಿಳಾಸವನ್ನು ಸಂಬಂಧಪಟ್ಟ ಹತ್ತಿರದ ಪೊಲೀಸ್ ಠಾಣೆ ಮತ್ತು ಕಾರ್ಮಿಕ ಇಲಾಖೆಗೆ ನೀಡಿ ನಂತರದಲ್ಲಿ ಕೆಲಸ ಮಾಡಿಸಿಕೊಳ್ಳುವುದು.
ತಪ್ಪಿದ್ದಲ್ಲಿ ಈ ಕಾರ್ಮಿಕರುಗಳಿಂದ ಯಾವುದೇ ಅಹಿತಕರ ಘಟನೆ/ಕಾನೂನು ಬಾಹೀರ ಚಟುವಟಿಕೆಗಳಿಗೆ ಕಾರ್ಮಿಕರನ್ನು ನೇಮಿಸಿಕೊಂಡಿದ್ದ ಮೇಸ್ತ್ರಿ/ ಮಾಲೀಕರು/ ಗುತ್ತಿಗೆದಾರರ ಮೇಲೆ ಸೂಕ್ತ ಕ್ರಮ ಜರುಗಿಸಲಾಗುವುದು ಎಂದು ಕಾರ್ಮಿಕ ಅಧಿಕಾರಿ ವೇಣುಗೋಪಾಲ್ ಎಂ.ಪಿ. ರವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ