ಸುದ್ದಿಲೈವ್/ಶಿವಮೊಗ್ಗ
ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟ ಶಿವಮೊಗ್ಗ ನಗರ ವತಿಯಿಂದ ಬಿಜೆಪಿ-ಜೆಡಿಎಸ್ ಪಕ್ಷದ ಷಡ್ಯಂತ್ರವನ್ನ ಖಂಡಿಸಿ ಪ್ರತಿಭಟನೆ ನಡೆಸಲಾಯಿತು.
ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರ ವಿರುದ್ಧ ಬಿಜೆಪಿ ಹಾಗೂ ಜೆಡಿಎಸ್ ಪಕ್ಷದವರು ಷಡ್ಯಂತರವನ್ನ ರೂಪಿಸಿ ಪಾದಯಾತ್ರೆ ನಡೆಸುವುದನ್ನ ಖಂಡಿಸಿ ಶಿವಪ್ಪ ನಾಯಕನ ಪ್ರತಿಮೆಯ ಬಳಿ ಪ್ರಯಿಭಟನಾಕಾರರು ಟೈರಿಗೆ ಬೆಂಕಿ ಹಚ್ಚುವುದರ ಮೂಲಕ ಪ್ರತಿಭಟನೆ ನಡೆಸಲಾಯಿತು.
ಪ್ರತಿಭಟನೆಯಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಆರ್ ಪ್ರಸನ್ನ ಕುಮಾರ್ ಜಿಲ್ಲಾ ಕಾಂಗ್ರೆಸ್ ಮುಖಂಡರುಗಳಾದ ಕಲಗೋಡು ರತ್ನಾಕರ್, ಮರಿಯಪ್ಪ, ಯೂತ್ ಕಾಂಗ್ರೆಸ್ ಪದಾಧಿಕಾರಿಗಳು ಭಾಗಿಯಾಗಿದ್ದರು.
ಪ್ರತಿಭಟನೆಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ, ಬಿಜೆಪಿ ಮತ್ತು ಜೆಸಿಎಸ್ ವಿರುದ್ಧ ಘೋಷಣೆಗಳನ್ನು ಕೂಗಲಾಯಿತು. ಪ್ರತಿಭಟನೆಯಲ್ಲಿ ಎಲ್ಲಾ ಸಮುದಾಯದ ಪ್ರತಿಭಟನಕಾರರು ಭಾಗವಹಿಸಿದ್ದರು. ಸ್ಥಳೀಯ ಪೊಲೀಸರು ಸೂಕ್ತ ಪೊಲೀಸ್ ಬಂದೋಬಸ್ತು ವ್ಯವಸ್ಥೆ ಮಾಡಲಾಗಿತ್ತು.
ಕರ್ನಾಟಕ ರಾಜ್ಯ ಕಂಡ ಧೀಮಂತ ನಾಯಕ ಸಾಮಾಜಿಕ ನ್ಯಾಯದ ಹರಿಕಾರ , ದೀನ ದಲಿತ, ಹಿಂದುಳಿದ ವರ್ಗಗಳ ಆಶಾಕಿರಣ, ಕರ್ನಾಟಕ ರಾಜ್ಯದ ಜನಪ್ರಿಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರ ವಿರುದ್ಧ ಬಿಜೆಪಿ ಮತ್ತು ಜೆಡಿಎಸ್ ನ ನಾಯಕರು ರೂಪಿಸಿರುವ ಷಡ್ಯಂತರವನ್ನು ಖಂಡಿಸಲಾಯಿತು.
ಇದನ್ನೂ ಓದಿ-https://www.suddilive.in/2024/08/aimim.html
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ