ಸುದ್ದಿಲೈವ್/ಶಿವಮೊಗ್ಗ
ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯು ಸೆ.01 ರಿಂದ ಡಿ.31ರವರೆಗೆ 21ನೇ ರಾಷ್ಟ್ರೀಯ ಜಾನುವಾರು ಗಣತಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.
ಈ ಅವಧಿಯಲ್ಲಿ ಪಶುಪಾಲನಾ ಇಲಾಖೆಯ ಸಿಬ್ಬಂದಿಗಳು ಜಿಲ್ಲೆಯ ಮನೆಮನೆಗೆ ತೆರಳಿ ಗಣತಿಕಾರ್ಯವನ್ನು ನಿರ್ವಹಿಸಲಿದ್ದು, ಸಾರ್ವಜನಿಕರು ಈ ಕಾರ್ಯಕ್ರಮಕ್ಕೆ ಅವಶ್ಯ ಮಾಹಿತಿಯನ್ನು ನೀಡಿ ಸಹಕರಿಸುವಂತೆ ಇಲಾಖೆಯ ಉಪನಿರ್ದೇಶಕ ಡಾ. ಎ. ಬಾಬುರತ್ನರವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ