ಸುದ್ದಿಲೈವ್/ಶಿವಮೊಗ್ಗ
ನಿನ್ನೆ ರಂದು ರಾತ್ರಿ ಕುಂಸಿ ಪೊಲೀಸ್ ಠಾಣಾ ವ್ಯಾಪ್ತಿಯ ದೊಡ್ಡದಾನವಂದಿ ಗ್ರಾಮಕ್ಕೆ ಹೋಗುವ ರಸ್ತೆಯಲ್ಲಿ ಬೈಕ್ ನಿಲ್ಲಿಸಿಕೊಂಡು ಮಾದಕ ವಸ್ತು ಗಾಂಜಾವನ್ನು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಮೇರೆಗೆ ಓರ್ವನನ್ನ ಬಂಧಿಸಲಾಗಿದೆ.
ಪೊಲೀಸ್ ಅಧೀಕ್ಷಕರಾದ ಮಿಥುನ್ ಕುಮಾರ್ ಜಿ.ಕೆ ಐಪಿಎಸ್, ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಅನಿಲ್ ಕುಮಾರ್ ಭೂಮಾರೆಡ್ಡಿ ಮತ್ತು ಕಾರಿಯಪ್ಪ ಎ.ಜಿರವರ ಮಾರ್ಗದರ್ಶನದಲ್ಲಿ, ಡಿವೈಎಸ್ಪಿ ಸುರೇಶ್, ಎಂ ರವರ ಮೇಲ್ವಿಚಾರಣೆಯಲ್ಲಿ, ಕುಂಸಿ ಪೊಲೀಸ್ ಠಾಣೆಯ ಪಿಐ ಹರೀಶ್ ಕೆ ಪಟೇಲ್, ಮತ್ತು ಪಿಎಸ್ಐ ತೊಳಚಾನಾಯಕ್, ಹಾಗೂ ಸಿಬ್ಬಂಧಿಗಳ ತಂಡವು ಸ್ಥಳಕ್ಕೆ ಹೋಗಿ ದಾಳಿ ನಡೆಸಲಾಯಿತು.
ಗಾಂಜಾ ಮಾರಾಟ ಮಾಡುತ್ತಿದ್ದ ಸೂಳೆಬೈಲಿನ ನಿವಾಸಿ ಸೈಯ್ಯದ್ ಸದ್ದಾಂ, 33 ವರ್ಷ, ಇವರನ್ನ ಬಂಧಿಸಲಾಯಿತು. ಆರೋಪಿತರಿಂದ ಅಂದಾಜು ಮೌಲ್ಯ 3,500/- ರೂ ಗಳ 120 ಗ್ರಾಂ ತೂಕದ ಒಣ ಗಾಂಜಾ ಹಾಗೂ ಅಂದಾಜು ಮೌಲ್ಯ 25,000/- ರೂಗಳ ಕೃತ್ಯಕ್ಕೆ ಬಳಸಿದ ದ್ವಿ ಚಕ್ರ ವಾಹನವನ್ನು ಅಮಾನತ್ತು ಪಡಿಸಿಕೊಳ್ಳಲಾಯಿತು. ಆರೋಪಿತನ ವಿರುದ್ಧ ಕುಂಸಿ ಪೊಲೀಸ್ ಠಾಣೆ ಗುನ್ನೆ ಸಂಖ್ಯೆ 0179/2024 ಕಲಂ 20(ಬಿ), 8(ಸಿ) NDPS ಕಾಯ್ದೆ ರೀತ್ಯ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತದೆ.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ