ಗುರುವಾರ, ಆಗಸ್ಟ್ 22, 2024

ದರ್ಪಮೆರೆದ ಇನ್ ಸ್ಪೆಕ್ಟರ್ ವಿರುದ್ಧ‌ ಟ್ರಸ್ಟ್ ಮತ್ತು ಸಂಘದಿಂದ ಮನವಿ



ಸುದ್ದಿಲೈವ್/ಶಿವಮೊಗ್ಗ


ತೀರ್ಥಹಳ್ಳಿ ಪೊಲೀಸ್ ಇನ್ಸ್‌ಪೆಕ್ಟರ್ ಅಶ್ವಥ್ ಗೌಡ ಅವರ ಉದ್ಧಟತನ ಮತ್ತು ಅಮಾನತ್ತಿಗೆ ಆಗ್ರಹಿಸಿ  ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಜಿಲ್ಲಾ ಶಾಖೆ, ಶಿವಮೊಗ್ಗ ಪ್ರೆಸ್ ಟ್ರಸ್ಟ್ ಎಸ್ಪಿ ಮತ್ತು ಡಿಸಿ ಮೂಲಕ ಕರ್ನಾಟಕದ ಮುಖ್ಯಮಂತ್ರಿ ಮತ್ತು ಗೃಹಸಚಿವರಿಗೆ ಮನವಿ ಸಲ್ಲಿಸಿತು.


ತೀರ್ಥಹಳ್ಳಿಯಲ್ಲಿ  ಪ್ರಜಾವಾಣಿ ವರದಿಗಾರ ನಿರಂಜನ್ ಅವರು ವರದಿಗಾಗಿ ರಥಬೀದಿಯಲ್ಲಿ ಪೋಟೋ, ವಿಡಿಯೋ ತೆಗೆಯುವಾಗ ಇಲ್ಲಿನ ಪೊಲೀಸ್ ಇನ್ಸ್ ಪೆಕ್ಟರ್ ಅಶ್ವಥ್ ಗೌಡ ಬಲವಂತವಾಗಿ ಪತ್ರಕರ್ತ ನಿರಂಜನ್ ಅವರಿಂದ ಮೊಬೈಲ್ ಕಿತ್ತುಕೊಂಡು ಠಾಣೆಗೆ ಹೋಗಿರುತ್ತಾರೆ. 


ಮೊಬೈಲ್ ಪಡೆಯಲು ಠಾಣೆಗೆ ಹೋದ ನಿರಂಜನ್ ಅವರನ್ನು    ಇನ್್ಸಪೆಕ್ಟರ್ ಅಶ್ವಥ್ ಗೌಡ ಅವರು ಅವಾಚ್ಯ ಶಬ್ದಗಳಿಂದ ನಿಂದಿಸಿ, ಸುಳ್ಳು ಕೇಸು ಹಾಕಿ ಜೈಲಿಗೆ ಕಳುಹಿಸುವುದಾಗಿ ಬೆದರಿಕೆ ಹಾಕಿದ್ದಾರೆ.  ಇದನ್ನು ಪ್ರಶ್ನಿಸಿದ ಇತರೆ ಪತ್ರಕರ್ತರ ಜೊತೆಗೂ ಉದ್ದಟತನದಿಂದ ವರ್ತಿಸಿದ್ದಾರೆ.


ವೃತ್ತ ನಿರೀಕ್ಷಕರ ವರ್ತನೆ ಖಂಡನೀಯ,  ಸುಳ್ಳು ಕೇಸು ಹಾಕುವುದಾಗಿ ಪತ್ರಕರ್ತರನ್ನೆ ಬೆದರಿಸುವ ಈ ಪೊಲೀಸ್ ಅಧಿಕಾರಿ ಸರ್ವಾಧಿಕಾರಿಯಂತೆ ವರ್ತಿಸುತ್ತಿರುವುದು ಸ್ಪಷ್ಡವಾಗಿದೆ.  ಈ ಮೂಲಕ ಅಭಿವ್ಯಕ್ತಿ ಸ್ವಾತಂತ್ರ್ಯ ದ ಹರಣ ಮಾಡಿದ್ದಾರೆ. ಪೊಲೀಸ್ ಅಧಿಕಾರಿಯ ಈ ವರ್ತನೆಯನ್ನು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಶಿವಮೊಗ್ಗ ಜಿಲ್ಲಾ ಶಾಖೆ, ಶಿವಮೊಗ್ಗ ಪ್ರೆಸ್ ಟ್ರಸ್ಟ್ ತೀವ್ರವಾಗಿ ಖಂಡಿಸುತ್ತದೆ.


ಪೊಲೀಸ್ ಅಧಿಕಾರಿ ಅಶ್ವಥ್ ಗೌಡ ಅವರನ್ನು ಈ ಕೂಡಲೆ ಅಮಾನತ್ತುಗೊಳಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸುತ್ತೇವೆ.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ