ಸುದ್ದಿಲೈವ್/ರಿಪ್ಪನ್‌ಪೇಟೆ
ಬೈಕ್ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರಿಗೆ ಗಂಭೀರ ಗಾಯಗಳಾಗಿರುವ ಘಟನೆ ತೀರ್ಥಹಳ್ಳಿ ರಸ್ತೆಯ ಮಳವಳ್ಳಿ ಕ್ರಾಸ್ ಬಳಿಯಲ್ಲಿ ನಡೆದಿದೆ.
ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯ ಕಗ್ಗಲಿಜೆಡ್ಡು ಗ್ರಾಮದ ಆದಿತ್ಯ (19) ಮತ್ತು ಯಶವಂತ್ (20) ಗಂಭೀರ ಗಾಯಗೊಂಡಿದ್ದಾರೆ.
ನಡೆದಿದ್ದೇನು..!?
ತೀರ್ಥಹಳ್ಳಿ ರಸ್ತೆಯ ಮಳವಳ್ಳಿ ಕ್ರಾಸ್ ನಲ್ಲಿ ಬೈಕ್ ಹಾಗೂ ಮಾರುತಿ ಓಮಿನಿ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ.
ಅಪಘಾತದಲ್ಲಿ ಬೈಕ್ ನಲ್ಲಿದ್ದ ಆದಿತ್ಯ ಎಂಬಾತನಿಗೆ ತಲೆಗೆ ತೀವ್ರವಾದ ಪೆಟ್ಟಾಗಿದ್ದು ಮತ್ತು ಯಶವಂತ್ ಎಂಬಾತನ ಕೈ ಮುರಿತವಾಗಿದೆ. ಕಾರಿನಲ್ಲಿದ್ದ ಕಲ್ಲೂರು ಗ್ರಾಮದ ಅಭಿಷೇಕ್ ಎಂಬಾತನಿಗೆ ಸಣ್ಣಪುಟ್ಟ ಗಾಯಗಳಾಗಿದೆ ಎಂದು ತಿಳಿದುಬಂದಿದೆ.
ಗಾಯಾಳುಗಳಿ ರಿಪ್ಪನ್‌ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗಕ್ಕೆ ರವಾನಿಸಲಾಗಿದೆ.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ