ಸುದ್ದಿಲೈವ್/ಸಾಗರ
ನಾಗರ ಪಂಚಮಿ ಹಬ್ಬದಂದೇ ಹಾವು ಕಚ್ಚಿ ಬಾಣಂತಿ ಮೃತಪಟ್ಟಿರುವ ಘಟನೆ ಜಿಲ್ಲೆಯ ಸಾಗರ ತಾಲೂಕಿನ ಹುತ್ತಾದಿಂಬ ಗ್ರಾಮದಲ್ಲಿ ಶುಕ್ರವಾರ ನಡೆದಿದೆ. ಗದ್ದೆಯಲ್ಲಿ ಮೇವು ತರಲು ತೆರಳಿದ್ದ ವೇಳೆ ಹಾವು ಕಚ್ಚಿದ್ದರಿಂದ ದುರಂತ ಸಂಭವಿಸಿದೆ.
ರಂಜಿತಾ (22) ಮೃತಪಟ್ಟ ಯುವತಿ. ಗದ್ದೆಯಲ್ಲಿ ಮೇವು ತರಲು ಹೋಗಿದ್ದ ವೇಳೆ ಪೊದೆಯಲ್ಲಿದ್ದ ಹಾವು, ಬಾಣಂತಿಗೆ ಕಚ್ಚಿದೆ. ಆದರೆ, ಈ ಬಗ್ಗೆ ಯುವತಿ ಗಮನಕ್ಕೆ ಬಂದಿಲ್ಲ. ಕೆಲಹೊತ್ತಿನ ಬಳಿಕ ಕುಟುಂಬಸ್ಥರು ನೋಡಿದಾಗ ಗದ್ದೆಯಲ್ಲಿ ರಂಜಿತಾ ಕುಸಿದು ಬಿದ್ದಿದ್ದಳು. ತಕ್ಷಣ ಸಾಗರದ ಉಪವಿಭಾಗೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಮಾರ್ಗ ಮಧ್ಯೆ ರಂಜಿತಾ ಮೃತಪಟ್ಟಿದ್ದಾಳೆ.
ಮೃತ ರಂಜಿತಾ 3 ವರ್ಷದ ಹೆಣ್ಣು ಹಾಗೂ 4 ತಿಂಗಳ ಹಸುಗೂಸು ಹೊಂದಿದ್ದಳು. ಆಸ್ಪತ್ರೆಯ ಶವಾಗಾರದ ಬಳಿ ಮೃತಳ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ