ಸುದ್ದಿಲೈವ್/ಶಿವಮೊಗ್ಗ
ದಸರಾ ಹಬ್ಬದ ಸಮಯದಲ್ಲಿ ಪ್ರಯಾಣಿಕರ ನಿರೀಕ್ಷಿತ ಹೆಚ್ಚುವರಿ ದಟ್ಟಣೆಯನ್ನು ಕಡಿಮೆಗೊಳಿಸುವ ಸಲುವಾಗಿ, ನೈಋತ್ಯ ರೈಲ್ವೆಯು 34 ರೈಲುಗಳಿಗೆ ತಾತ್ಕಾಲಿಕವಾಗಿ ಹೆಚ್ಚುವರಿ ಬೋಗಿಗಳನ್ನು ಜೋಡಿಸಲು ನಿರ್ಧರಿಸಲಾಗಿದೆ. ಅವುಗಳ ಮಾಹಿತಿ ಈ ಕೆಳಗಿನಂತಿವೆ:
ಅಕ್ಟೋಬರ್ 4 ರಿಂದ 15 ರವರೆಗೆ ರೈಲು ಸಂಖ್ಯೆ 17301 ಮೈಸೂರು-ಬೆಳಗಾವಿ ಎಕ್ಸ್ಪ್ರೆಸ್, ಅಕ್ಟೋಬರ್ 1 ರಿಂದ 12 ರವರೆಗೆ ಬೆಳಗಾವಿ-ಮೈಸೂರು ಎಕ್ಸ್ಪ್ರೆಸ್ (17302), ಅಕ್ಟೋಬರ್ 2 ರಿಂದ 13 ರವರೆಗೆ ಮೈಸೂರು-ಚಾಮರಾಜನಗರ-ಮೈಸೂರು ಎಕ್ಸ್ಪ್ರೆಸ್ (06233/06234),
ಅಕ್ಟೋಬರ್ 2 ರಿಂದ 13 ರವರೆಗೆ ಮೈಸೂರು-ಬಾಗಲಕೋಟ ಬಸವ ಎಕ್ಸ್ಪ್ರೆಸ್ (17307) ಮತ್ತು ಅಕ್ಟೋಬರ್ 3 ರಿಂದ 14 ರವರೆಗೆ ಬಾಗಲಕೋಟ-ಮೈಸೂರು ಬಸವ ಎಕ್ಸ್ಪ್ರೆಸ್ (17308), ಅಕ್ಟೋಬರ್ 1 ರಿಂದ 12 ರವರೆಗೆ ಎಸ್ಎಸ್ಎಸ್ ಹುಬ್ಬಳ್ಳಿ-ಮೈಸೂರು ಹಂಪಿ ಎಕ್ಸ್ಪ್ರೆಸ್ (16591),
ಅಕ್ಟೋಬರ್ 4 ರಿಂದ 15 ರವರೆಗೆ ಮೈಸೂರು-ಎಸ್ಎಸ್ಎಸ್ ಹುಬ್ಬಳ್ಳಿ ಹಂಪಿ ಎಕ್ಸ್ಪ್ರೆಸ್ (16592), ಅಕ್ಟೋಬರ್ 2 ರಿಂದ 13 ರವರೆಗೆ ಮೈಸೂರು-ಪಂಢರಪುರ ಗೋಲಗುಂಬಜ್ ಎಕ್ಸ್ಪ್ರೆಸ್ (16535) ಮತ್ತು ಅಕ್ಟೋಬರ್ 3 ರಿಂದ 14 ರವರೆಗೆ ಪಂಢರಪುರ ಗೋಲಗುಂಬಜ್ ಎಕ್ಸ್ಪ್ರೆಸ್ (16536) ರೈಲುಗಳಿಗೆ ತಲಾ ಒಂದು ಸ್ಲೀಪರ್ ಕ್ಲಾಸ್ ಹೆಚ್ಚುವರಿ ಬೋಗಿಗಳನ್ನು ಜೋಡಿಸಲಾಗುತ್ತಿದೆ.
ಅಕ್ಟೋಬರ್ 3 ರಿಂದ 12 ರವರೆಗೆ ರೈಲು ಸಂಖ್ಯೆ 16227 ಮೈಸೂರು-ತಾಳಗುಪ್ಪ ಎಕ್ಸ್ಪ್ರೆಸ್ ಮತ್ತು ಅಕ್ಟೋಬರ್ 4 ರಿಂದ 13 ರವರೆಗೆ ತಾಳಗುಪ್ಪ-ಮೈಸೂರು ಎಕ್ಸ್ಪ್ರೆಸ್ (16228) ರೈಲುಗಳಿಗೆ ತಲಾ ಎರಡು ಸ್ಲೀಪರ್ ಕ್ಲಾಸ್ ಹೆಚ್ಚುವರಿ ಬೋಗಿಗಳನ್ನು ಜೋಡಿಸಲಾಗುತ್ತಿದೆ.
ಅಕ್ಟೋಬರ್ 4 ರಿಂದ 13 ರವರೆಗೆ ರೈಲು ಸಂಖ್ಯೆ 06543/06544 ಮೈಸೂರು-ಚಾಮರಾಜನಗರ-ಮೈಸೂರು ಪ್ಯಾಸೆಂಜರ್ ಸ್ಪೆಷಲ್, ಅಕ್ಟೋಬರ್ 4 ರಿಂದ 13 ರವರೆಗೆ ತಾಳಗುಪ್ಪ-ಮೈಸೂರು ಕುವೆಂಪು ಎಕ್ಸ್ಪ್ರೆಸ್ (16221), ಅಕ್ಟೋಬರ್ 3 ರಿಂದ 12 ರವರೆಗೆ ಮೈಸೂರು-ತಾಳಗುಪ್ಪ ಕುವೆಂಪು ಎಕ್ಸ್ಪ್ರೆಸ್,
ಅಕ್ಟೋಬರ್ 3 ರಿಂದ 12 ರವರೆಗೆ ಕೆಎಸ್ಆರ್ ಬೆಂಗಳೂರು-ಅರಸೀಕೆರೆ-ಕೆಎಸ್ಆರ್ ಬೆಂಗಳೂರು ಪ್ಯಾಸೆಂಜರ್ (06273/06274), ಅಕ್ಟೋಬರ್ 3 ರಿಂದ 12 ರವರೆಗೆ ಕೆಎಸ್ಆರ್ ಬೆಂಗಳೂರು-ಚನ್ನಪಟ್ಟಣ-ಕೆಎಸ್ಆರ್ ಬೆಂಗಳೂರು ಪ್ಯಾಸೆಂಜರ್ (06581/06582), ಅಕ್ಟೋಬರ್ 3 ರಿಂದ 12 ರವರೆಗೆ ಅರಸೀಕೆರೆ-ಮೈಸೂರು ಪ್ಯಾಸೆಂಜರ್ (06213),
ಅಕ್ಟೋಬರ್ 5 ರಿಂದ 14 ರವರೆಗೆ ಮೈಸೂರು-ಅರಸೀಕೆರೆ ಪ್ಯಾಸೆಂಜರ್ (06214), ಅಕ್ಟೋಬರ್ 3 ರಿಂದ 12 ರವರೆಗೆ ಮೈಸೂರು-ಶಿವಮೊಗ್ಗ ಟೌನ್ ಎಕ್ಸ್ಪ್ರೆಸ್ (16225), ಅಕ್ಟೋಬರ್ 5 ರಿಂದ 14 ರವರೆಗೆ ಶಿವಮೊಗ್ಗ ಟೌನ್-ಮೈಸೂರು ಎಕ್ಸ್ಪ್ರೆಸ್ (16226), ಅಕ್ಟೋಬರ್ 3 ರಿಂದ 12 ರವರೆಗೆ ಶಿವಮೊಗ್ಗ ಟೌನ್-ಚಿಕ್ಕಮಗಳೂರು ಪ್ಯಾಸೆಂಜರ್ (07365),
ಅಕ್ಟೋಬರ್ 5 ರಿಂದ 14 ರವರೆಗೆ ಚಿಕ್ಕಮಗಳೂರು-ಶಿವಮೊಗ್ಗ ಟೌನ್ ಪ್ಯಾಸೆಂಜರ್ (07366), ಅಕ್ಟೋಬರ್ 4 ರಿಂದ 13 ರವರೆಗೆ ಚಿಕ್ಕಮಗಳೂರು-ಯಶವಂತಪುರ-ಚಿಕ್ಕಮಗಳೂರು ಎಕ್ಸ್ಪ್ರೆಸ್ (16239/16240), ಅಕ್ಟೋಬರ್ 1 ರಿಂದ 12 ರವರೆಗೆ ಅರಸೀಕೆರೆ-ಮೈಸೂರು ಪ್ಯಾಸೆಂಜರ್ (06267), ಅಕ್ಟೋಬರ್ 4 ರಿಂದ 15 ರವರೆಗೆ ಮೈಸೂರು-ಅರಸೀಕೆರೆ ಪ್ಯಾಸೆಂಜರ್ (06268), ಅಕ್ಟೋಬರ್ 1 ರಿಂದ 12 ರವರೆಗೆ ಮೈಸೂರು-ಎಸ್ಎಂವಿಟಿ ಬೆಂಗಳೂರು ಪ್ಯಾಸೆಂಜರ್ (06269),
ಅಕ್ಟೋಬರ್ 3 ರಿಂದ 14 ರವರೆಗೆ ಎಸ್ಎಂವಿಟಿ ಬೆಂಗಳೂರು-ಮೈಸೂರು (06270), ಅಕ್ಟೋಬರ್ 2 ರಿಂದ 13 ರವರೆಗೆ ಎಸ್ಎಂವಿಟಿ ಬೆಂಗಳೂರು-ಕರೈಕಲ್ ಎಕ್ಸ್ಪ್ರೆಸ್ (16529) ಮತ್ತು ಅಕ್ಟೋಬರ್ 3 ರಿಂದ 14 ರವರೆಗೆ ಕರೈಕಲ್-ಎಸ್ಎಂವಿಟಿ ಬೆಂಗಳೂರು ಎಕ್ಸ್ಪ್ರೆಸ್ ರೈಲುಗಳಿಗೆ ತಲಾ ಒಂದು ಸಾಮಾನ್ಯ ದ್ವಿತೀಯ ದರ್ಜೆ ಹೆಚ್ಚುವರಿ ಬೋಗಿಗಳನ್ನು ಜೋಡಿಸಲಾಗುತ್ತಿದೆ.