Suddilive/ಶಿವಮೊಗ್ಗ
ಪುರದಾಳು ಆಲದೇವರ ಹೊಸೂರು ಗ್ರಾಮದಲ್ಲಿ ಆನೆ ದಾಳಿಗೆ ಬಲಿಯಾದ ರೈತ ಹನುಮಂತಪ್ಪ ದಾಸಣ್ಣನವರ ಕುಟುಂಬಕ್ಕೆ 25 ಲಕ್ಷ ಪರಿಹಾರ ನೀಡುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯಿಂದ ಜಿಲ್ಲಾಧಿಕಾರಿ ಕಚೇರಿ ಎದುರಿಗೆ ಪ್ರತಿಭಟನೆ ನಡೆಸಲಾಯಿತು.
ಬಸ್ ನಿಲ್ದಾಣದಿಂದ ಡಿಸಿ ಕಚೇರಿಯ ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ರೈತರು ಡಿಸಿ ಕಚೇರಿ ಆವರಣದಲ್ಲಿ ಧರಣಿ ಕುಳಿತು, ಕಾಡಾನೆ ದಾಳಿಗೆ ಕ್ರಮ ಕೈಗೊಳ್ಳದ ಅರಣ್ಯ ಮತ್ತು ಸರ್ಕಾರಕ್ಕೆ ದಿಕ್ಕಾರ ಕೂಗಿದ್ದಾರೆ. ಜಮೀನಿನಲ್ಲಿ ಕೆಲಸ ಮಾಡುವಾಗ ಆನೆ ದಾಳಿ ಮಾಡಿದ ಹಿನ್ನೆಲೆಯಲ್ಲಿ ಅಸುನೀಗಿದ ರೈತನ ಕುಟುಂಬಕ್ಕೆ ಪರಿಹಾರ ನೀಡುವಂತೆ ಆಗ್ರಹಿಸಿದರು.
ಪುರದಾಳು, ಬೇಳೂರು ಹಾತ ತಮ್ಮಡಿಹಳ್ಳಿ ಸುತ್ತಮುತ್ತಲಿನ ಗ್ರಾಮಗಳಲ್ಲಿ ಗುಂಪು ಗುಂಪಾಗಿ ಆನೆ ದಾಳಿ ಮಾಡಿ ಬೆಳೆ ನಾಶ ಮಾಡುತ್ತಿವೆ ಎಂದರು.
ಆನೆಗಳು ಜಮೀನುಗಳಿಗೆ ನುಗ್ಗಂದತೆ ರಾಜ್ಯ ಸರಕಾರ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಸಂಘದ ರಾಜ್ಯಾಧ್ಯಕ್ಷ ಎಚ್.ಆರ್. ಬಸವರಾಜಪ್ಪ, ಇ.ಬಿ. ಜಗದೀಶ್, ಟಿ.ಎಂ. ಚಂದ್ರಪ್ಪ, ಜಿ.ಎನ್. ಪಂಚಾಕ್ಷರಿ, ಜ್ಞಾನೇಶ್ ಇದ್ದರು.