ಸುದ್ದಿಲೈವ್/ಶಿವಮೊಗ್ಗ
ರಾಷ್ಟಿçಯ ಆರೋಗ್ಯ ಅಭಿಯಾನ ಪಿಎಂ-ಎಬಿಹೆಚ್‌ಐಎ ಸ್ಪರ್ಶ್ ಯೋಜನೆಯಡಿ ಗುತ್ತಿಗೆ ಆಧಾರದ ಮೇಲೆ ಖಾಲಿ ಇರುವ ಅರೆ ವೈದ್ಯಕೀಯ ಹುದ್ದೆಗಳನ್ನು ಭರ್ತಿ ಮಾಡುವ ಸಂಬAಧ ಕರೆಯಲಾಗಿದ್ದ ನೇರ ಸಂದರ್ಶನದಲ್ಲಿ ಭಾಗವಹಿಸಿದ್ದ(ಕಿರಿಯ ಆರೋಗ್ಯ ಸಹಾಯಕರು) ಅಭ್ಯರ್ಥಿಗಳ ರೋಸ್ಟರ್ ಕಂ ಮೆರಿಟ್ ಆಧಾರದ ಮೇಲೆ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಕಾರಿಗಳ ಕಚೇರಿಯ ಸೂಚನಾ ಫಲಕದಲ್ಲಿ ಪ್ರಕಟಿಸಿದ್ದು, ಆಕ್ಷೇಪಣೆಗಳಿದ್ದಲ್ಲಿ ಸಲ್ಲಿಸಬಹುದು.
ಅಭ್ಯರ್ಥಿಗಳ ಆಕ್ಷೇಪಣೆಗಳು ಇದ್ದಲ್ಲಿ ಲಿಖಿತ ರೂಪದಲ್ಲಿ ದಿ: 17-09-2024 ರ ಸಂಜೆ 5.30 ರೊಳಗೆ ಜಿಲ್ಲಾ ಆರ್.ಸಿ.ಹೆಚ್. ಅಧಿಕಾರಿಗಳು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ, ಎನ್.ಹೆಚ್.ಎಂ ವಿಭಾಗಕ್ಕೆ ಸಲ್ಲಿಸುವುದು. ಆನಂತರ ಬಂದ ಆಕ್ಷೇಪಣೆಗಳನ್ನು ಸ್ವೀಕರಿಸಲಾಗುವುದಿಲ್ಲ ಎಂದು ಜಿಲ್ಲಾ ಆರ್‌ಸಿಹೆಚ್ ಅಧಿಕಾರಿಗಳು ತಿಳಿಸಿದ್ದಾರೆ.