Girl in a jacket

ಗಣಪತಿ ವಿಸರ್ಜನ ಮೆರವಣಿಗೆ ವೇಳೆ ಹೆಜ್ಜೆ ಹಾಕುತ್ತಿದ್ದ ವ್ಯಕ್ತಿ ಸಾವು-ಡಿಜೆಗೆ ಹೃದಯಾಘಾತ?



ಸುದ್ದಿಲೈವ್/ತೀರ್ಥಹಳ್ಳಿ 


ನಿಷೇಧದ ನಡುವೆ ಗಣಪತಿ ವಿಸರ್ಜನೆ ಮೆರವಣಿಗೆಯಲ್ಲಿ ವಿಪರೀತ ಪ್ರಮಾಣದಲ್ಲಿ ಡಿಜೆ ಬಳಕೆಯಾಗಿದೆ. ಡಿಜೆ ಸದ್ದಿಗೆ ಹೆಜ್ಜೆ ಹಾಕುತ್ತಿದ್ದ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಭಾನುವಾರ ಬೇಗುವಳ್ಳಿ ಗ್ರಾಮದಲ್ಲಿ ನಡೆದಿದೆ.


ಬಿದರಹಳ್ಳಿ ಗ್ರಾಮದ ಇ.ಎಸ್. ಶ್ಯಾಮಣ್ಣ (66) ಗಣಪತಿ ವಿಸರ್ಜನೆ ಮೆರವಣಿಗೆಯಲ್ಲಿ ಹಾಡಿಗೆ ಹೆಜ್ಜೆ ಹಾಕುವ ವೇಳೆ ತಲೆಸುತ್ತು ಬಂದಿದ್ದು ಅಸ್ಪಸ್ಥರಾಗಿದ್ದಾರೆ. ಸ್ಥಳದಲ್ಲೇ ಹೃದಯಾಘಾತವಾಗಿ ಮೃತಪಟ್ಟಿದ್ದಾರೆ. ವಿಪರೀತ ಡಿಜೆ ಸದ್ದಿಗೆ ಮೃತಪಟ್ಟಿದ್ದಾರೆ ಎಂದು ಸಾರ್ವಜನಿಕರು ದೂರುತ್ತಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು