ಸುದ್ದಿಲೈವ್/ಶಿವಮೊಗ್ಗ
ಒಕ್ಕಲಿಗ ಸಮಾಜದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಶಾಸಕ ಮುನಿರತ್ನ ಅವರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಒಕ್ಕಲಿಗರ ಯುವ ವೇದಿಕೆ ವತಿಯಿಂದ ಪ್ರತಿಭಟನೆ ನಡೆಸಲಾಯಿತು
ಒಕ್ಕಲಿಕ ಹಾಗೂ ದಲಿತ ಹೆಣ್ಣು ಮಕ್ಕಳ ಬಗ್ಗೆ ಅಶ್ಲೀಲವಾಗಿ ಮಾತನಾಡಿರುವ ಶಾಸಕ ಮುನಿರತ್ನ ಅವರನ್ನು ಶಾಸಕ ಸ್ಥಾನದಿಂದ ಅಮಾನತುಗೊಳಿಸಬೇಕು. ಹಾಗೂ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಶಾಸಕ ಮುನಿರತ್ನ ಅತ್ಯಾಚಾರಿ ಹಾಗೆ ಹನಿಟ್ರಾಪ್‌ನ ರೂವಾರಿಯಾಗಿದ್ದಾರೆ ಎಂದು ದೂರಿದ್ದಾರೆ. ಗುತ್ತಿಗೆದಾರರ ಜೊತೆಗಿನ ಸಂಭಾಷಣೆ ಹೆಣ್ಣು ಮಕ್ಕಳ ವಿಷಯವಾಗಿ ಒಕ್ಕಲಿಗ ಹಾಗೂ ಪರಿಶಿಷ್ಟರ ಬಗ್ಗೆ ಅಸಭ್ಯವಾಗಿ ಮಾತನಾಡಿದ್ದಾರೆ. ಒಕ್ಕಲಿಗರ ಸಮುದಾಯದ ನಾಡಿಗೆ ನೀಡಿರುವ ಕೊಡುಗೆ ಅಪಾರ ಒಕ್ಕಲುತನ ಪಶುಪಾಲನೆ ಕೃಷಿ ಹೈನುಗಾರಿಕೆ ಮಾಡಿ ಒಕ್ಕಲಿಗರು ನಾಡಿನ ಕಟ್ಟಿದ್ದಾರೆ ರಾಜಕೀಯವಾಗಿ ಶೈಕ್ಷಣಿಕವಾಗಿ ಸಾಮಾಜಿಕ ಅಲ್ಲದೆ ನಾಡಿನ ಸಾಂಸ್ಕೃತಿಯಾಗಿ ನೀಡಿದ್ದಾರೆ ಎಂದು ಪ್ರತಿಭಟನಾಕಾರರು ಹೇಳಿದರು.