ಸೋಮವಾರ, ಸೆಪ್ಟೆಂಬರ್ 2, 2024

ಎಡಿಜಿಪಿ ನೇತೃರ್ವದಲ್ಲಿ ವಿಮರ್ಶನಾತ್ಮಕ ಸಭೆ





ಸುದ್ದಿಲೈವ್/ಶಿವಮೊಗ್ಗ


ಬೆಳಿಗ್ಗೆ ಎಸ್ಪಿ ಮತ್ತು ಡಿಸಿ ನೇತೃತ್ವದಲ್ಲಿ ಗಣೇಶ ಮತ್ತು ಈದ್ ಮಿಲಾದ್ ಹಬ್ಬದಪ್ರಯುಕ್ತ ಶಾಂತಿ ಸಭೆ ನಡೆದರೆ ನಂತರ ಎಡಿಜಿಪಿ ಹಿತೇಂದ್ರ ಆರ್ ನೇತೃತ್ವದಲ್ಲಿ ಅಧಿಕಾರಿಗಳ ವಿಮರ್ಶನಾತ್ಮಕ ಸಭೆ ನಡೆದಿದೆ. 


ಇಂದು  ಮಧ್ಯಾಹ್ನ  ಹಿತೇಂದ್ರ ಆರ್. ಐಪಿಎಸ್, ಮಾನ್ಯ ಎಡಿಜಿಪಿ (ಕಾನೂನು & ಸುವ್ಯವಸ್ಥೆ) ರವರು ಮುಂಬರುವ ಗೌರಿ ಗಣೇಶ ಹಾಗೂ ಈದ್ ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ,  ಶಿವಮೊಗ್ಗ ಜಿಲ್ಲೆಗೆ ಭೇಟಿ ನೀಡಿ, ಡಿಎಆರ್  ಪೊಲೀಸ್ ಸಭಾಂಗಣದಲ್ಲಿ ಶಿವಮೊಗ್ಗ ಜಿಲ್ಲೆಯ ಎಲ್ಲಾ ಪೊಲೀಸ್ ನಿರೀಕ್ಷಕರು, ಪೊಲೀಸ್ ವೃತ್ತ ನಿರೀಕ್ಷಕರು ಮತ್ತು ಪೊಲೀಸ್ ಉಪಾಧೀಕ್ಷಕರುಗಳೊಂದಿಗೆ ವಿಮರ್ಶನಾ ಸಭೆ ನಡೆಸಿದರು.  


ಸಭೆಯಲ್ಲಿ ಹಾಜರಿದ್ದ ಪೊಲೀಸ್ ಅಧಿಕಾರಿಗಳಿಗೆ ಗೌರಿ ಗಣೇಶ ಹಾಗೂ ಈದ್ ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳು, ಗಣೇಶ ಮೂರ್ತಿಗಳ ವಿಸರ್ಜನಾ ಮೆರವಣಿಗೆ ಮತ್ತು ಈದ್ ಮಿಲಾದ್ ಮೆರವಣಿಗೆಯ ಬಂದೋಬಸ್ತ್ ವ್ಯವಸ್ಥೆ,  ಗಣೇಶ ಪೆಂಡಾಲ್ ಮತ್ತು ಮೆರವಣಿಗೆ ಮಾರ್ಗ ಹಾಗೂ ಸೂಕ್ಷ್ಮ ಸ್ಥಳಗಳಲ್ಲಿ ಸಿಸಿ ಟಿವಿ ಕ್ಯಾಮೆರಾ ಅಳವಡಿಕೆ, ಕಿಡಿಗೇಡಿಗಳು ಹಾಗೂ ರೌಡಿ ಆಸಾಮಿಗಳ ಚಟುವಟಿಕೆಗಳ ಮೇಲೆ ನಿಗಾವಹಿಸುವಂತೆ 


ಮತ್ತು ಯಾವುದೇ ಸಮಸ್ಯೆ / ತೊಂದರೆಯನ್ನುಂಟು ಮಾಡುವವರ ವಿರುದ್ಧ ಕಾನೂನು ರೀತ್ಯ ಕ್ರಮ ಕೈಗೊಳ್ಳುವಂತೆ ಹಾಗೂ ಗಾಂಜಾ ಮಾರಾಟ / ಸೇವನೆ  ಮಾಡುವವರ* ಬಗ್ಗೆ ಮಾಹಿತಿ ಕಲೆಹಾಕಿ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಸೂಚಿಸಿ ಉತ್ತಮ ಕರ್ತವ್ಯ ನಿರ್ವಹಿಸುವ ನಿಟ್ಟಿನಲ್ಲಿ ಸಲಹೆಗಳನ್ನು ನೀಡಿದರು.


ಈ ಸಂದರ್ಭದಲ್ಲಿ ರಮೇಶ್, ಐಪಿಎಸ್, ಮಾನ್ಯ ಡಿಐಜಿಪಿ ಪೂರ್ವ ವಲಯ ದಾವಣಗೆರೆ,  ಮಿಥುನ್ ಕುಮಾರ್ ಜಿ. ಕೆ, ಐಪಿಎಸ್, ಮಾನ್ಯ ಪೊಲೀಸ್ ಅಧೀಕ್ಷಕರು ಶಿವಮೊಗ್ಗ ಜಿಲ್ಲೆ,  ಅನಿಲ್ ಕುಮಾರ್ ಭೂಮರಡ್ಡಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕರು-1, ಕಾರಿಯಪ್ಪ ಎ ಜಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2, ಕೃಷ್ಣಮೂರ್ತಿ,  ಪೊಲೀಸ್ ಉಪಾಧೀಕ್ಷಕರು, ಡಿಎಆರ್, ಶಿವಮೊಗ್ಗ,  ಬಾಬು ಆಂಜನಪ್ಪ, ಪೊಲೀಸ್ ಉಪಾಧೀಕ್ಷಕರು, ಶಿವಮೊಗ್ಗ ಎ ಉಪ ವಿಭಾಗ,  ಸುರೇಶ್ ಎಂ ಪೊಲೀಸ್ ಉಪಾಧೀಕ್ಷಕರು, ಶಿವಮೊಗ್ಗ ಬಿ ಉಪ ವಿಭಾಗ, ಗೋಪಾಲಕೃಷ್ಣ  ಟಿ ನಾಯಕ್, ಪೊಲೀಸ್ ಉಪಾಧೀಕ್ಷಕರು, ಸಾಗರ ಉಪ ವಿಭಾಗ, ನಾಗರಾಜ್ ಪೊಲೀಸ್ ಉಪಾಧೀಕ್ಷಕರು, ಭದ್ರಾವತಿ ಉಪ ವಿಭಾಗ, 


ಕೇಶವ್, ಪೊಲೀಸ್ ಉಪಾಧೀಕ್ಷಕರು, ಶಿಕಾರಿಪುರ ಉಪ ವಿಭಾಗ,  ಗಜಾನನ ವಾಮನ ಸುತಾರ  ಪೊಲೀಸ್ ಉಪಾಧೀಕ್ಷಕರು, ತೀರ್ಥಹಳ್ಳಿ ಉಪ ವಿಭಾಗ,  ಕೃಷ್ಣಮೂರ್ತಿ,  ಪೊಲೀಸ್ ಉಪಾಧೀಕ್ಷಕರು, ಸಿಇಎನ್ ಪೊಲೀಸ್ ಠಾಣೆ, ಶಿವಮೊಗ್ಗ, ಮತ್ತು ಶಿವಮೊಗ್ಗ ಜಿಲ್ಲೆಯ ಎಲ್ಲಾ ಪೊಲೀಸ್ ನಿರೀಕ್ಷಕರು, ಹಾಗೂ ಪೊಲೀಸ್ ವೃತ್ತ ನಿರೀಕ್ಷಕರು ಉಪಸ್ಥಿತರಿದ್ದರು.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ