Girl in a jacket

ಸಿಎಂ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ



ಸುದ್ದಿಲೈವ್/ಶಿವಮೊಗ್ಗ

ಸಿಎಂ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜೇಂದ್ರ


ಪ್ರತಿಭಟನೆಗೆ ಕರೆ ನೀಡಿದ್ದು ಶಿವಮೊಗ್ಗದಲ್ಲೂ ಪಕ್ಷವು ಡಿ.ಎಸ್.ಅರುಣ್ ರವರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದೆ. 

ರಾಜ್ಯ ಹೈಕೋರ್ಟ್ ನ್ಯಾ.ನಾಗಪ್ರಸನ್ನ ಅವರು ಸಿಎಂ ವಿಚಾರಣ ಅರ್ಜಿಯನ್ನ ತಿರಸ್ಕರಿಸಿ ರಾಜ್ಯಪಾಲರು ಸಿಎಂ ಸಿದ್ದರಾಮಯ್ಯನವರ ವಿರುದ್ಧ ಪ್ರಾಸಿಕ್ಯೂಷನ್ ನಡೆಸಲು ನೀಡಿರುವ ಅನುಮತಿಯನ್ನ ಎತ್ತಿ ಹಿಡಿದಿದ್ದಾರೆ.  

ಇಂದು ನ್ಯಾಯಾಲಯದ ತೀರ್ಪು ಬಂದ ಬೆನ್ನಲ್ಲೇ ಬಿಜೆಪಿ ಸಿಎಂ ಸಿದ್ದರಾಮಯ್ಯನವರ ರಾಜೀನಾಮೆ ನೀಡುವಂತೆ ಆಗ್ರಹಿಸಿ ಬಿಜೆಪಿ ಬೀದಿಗಿಳಿದು ಪ್ರತಿಭಟಿಸಲು ತೀರ್ಮಾನಿಸಿದೆ. 

ತೊಲಗಲಿ ತೊಲಗಲಿ ಭ್ರಷ್ಟ ಕಾಂಗ್ರೆಸ್ ತೊಲಗಲಿ ಎಂದು ಗೋಪಿವೃತ್ತದಲ್ಲಿ ಬಿಜೆಪಿ ಪ್ರತಿಭಟನೆ ನಡೆಸಿದೆ. ಮೂಡ ಹಗರಣದಲ್ಲಿ ಸಿದ್ದರಾಮಯ್ಯನವರ ವಿರುದ್ಧ  ತನಿಖೆಗೆ ಅನುಮತಿ ನೀಡಿದ ಹೈಕೋರ್ಟ್ ತೀರ್ಪಿನ ಪ್ರಕಾರ ಕೂಡಲೇ ಸಿಎಂ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿ  ಬೃಹತ್ ಪ್ರತಿಭಟನೆ ನಡೆದಿದೆ.

ಈ ಸಂದರ್ಭದಲ್ಲಿ ಸಂಸದ ಬಿ ವೈ ರಾಘವೇಂದ್ರ ಶಾಸಕರಾದ ಡಾ.ಧನಂಜಯ ಸರ್ಜಿ, ಡಿಎಸ್ ಅರುಣ್,  ಧನಂಜಯ್ ಸರ್ಜಿ ಪ್ರಮುಖರಾದ ಮೋಹನ್ ರೆಡ್ಡಿ ಸಂತೋಷ್ ಬಳ್ಳಕೆರೆ ನಾಗರಾಜ್ ಜಗದೀಶ್. ವೀರಭದ್ರ ಪೂಜಾರಿ ಸುರೇಖಾ ಮುರುಳಿಧರ್ ರಾಹುಲ್ ಬಿದರೆ, ಧೀನ್ ದಯಾಳ್ ಸೇರಿದಂತೆ ಬಿಜೆಪಿಯ ಪ್ರಮುಖರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು