Girl in a jacket

ರಾಹುಲ್ ಗಾಂಧಿ ವಿರುದ್ಧ ಪ್ರಚೋದನಕಾರಿ ಹೇಳಿಕೆ, ನಗರ ಕಾಂಗ್ರೆಸ್ ಪ್ರತಿಭಟನೆ



ಸುದ್ದಿಲೈವ್/ಶಿವಮೊಗ್ಗ


ಮಹಾರಾಷ್ಟ್ರದಲ್ಲಿ ಬಿಜೆಪಿ ರಾಜ್ಯಸಭಾ ಸದಸ್ಯ ಅನಿಲ್ ಬೋಂಡೆ, ಶಿವಸೇನಾ ಪಕ್ಷದ ಶಾಸಕ ಸಂಜಯ್ ಗಾಯಕ್ವಾಡ್ ಅವರು ರಾಹುಲ್ ಗಾಂಧಿಯನಾಲಿಗೆ ಸೀಳಬೇಕು ಮತ್ತು ನಾಲಿಗೆ ಕತ್ತರಿಸಿದವರಿಗೆ 11 ಲಕ್ಷ ರೂ. ಬಹುಮಾನ ಘೋಷಿಸಿರುವುದು ವಿವಾದಕ್ಕೆ ಕಾರಣವಾಗಿದೆ. 


ಇಂದು ಶಿವಮೊಗ್ಗ ನಗರ ಉತ್ತರ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಎಸ್ ಶಿವಕುಮಾರ್ ನೇತೃತ್ವದಲ್ಲಿ ಪ್ರತಿಭಟನಾ ಮೆರವಣಿಗೆ ನಡೆದಿದ್ದು, ಕಾಂಗ್ರೆಸ್ ಕಚೇರಿಯಿಂದ ಜಿಲ್ಲಾಧಿಕಾರಿಗಳ ಕಚೇರಿಗೆ ತಲುಪಿ ಡಿಸಿಗೆ ಮನವಿ ಸಲ್ಲಿಸಲಾಯಿತು‌. 


ವಿದೇಶದಲ್ಲಿ ರಾಹುಲ್ ಗಾಂಧಿ ಅವರು ಮೀಸಲಾತಿ ವಿರೋಧಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಈ ಇಬ್ಬರು ನಾಯಕರ ಹೇಳಿಮೆ ಸರಿಯಲ್ಲ. ಬಹುಜನರ ಭಾವನೆಗೆ ಧಕ್ಕೆ ತರುವಂತ ಹೇಳಿಕೆ ನೀಡಿರುವ ರಾಹುಲ್ ಗಾಂಧಿ, ಧ್ಯಾನೇಶ್ ಮಹಾರಾವ್ ಅಥವಾ ಶ್ಯಾಮ್ ಮಾನವ್ ನಾಲಿಗೆ ಕತ್ತರಿಸುವುದಲ್ಲ ಸೀಳಬೇಕೆಂದು ಅನಿಲ್ ಬೋಂಡೆ ಸಮರ್ಥಿಸಿಕೊಂಡಿದ್ದಾರೆ. 


ಅವರ ಪ್ರಚೋದನೆ ಹೇಳಿಕೆಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಸಮಿತಿ ಆಗ್ರಹಿಸಿದೆ. ಪ್ರತಿಭಟನೆಯಲ್ಲಿ ಮಾಜಿ ಕಾರ್ಪರೇಟರ್ ಹೆಚ್.ಸಿ ಯೋಗೀಶ್, ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್ ರಮೇಶ್, ಇಸ್ಮಾಯಿಲ್ ಖಾನ್, ಮಾಜಿ ಕಾರ್ಪರೇಟರ್ ಯುಮುನಾ ರಂಗೇಗೌಡ ಮೊದಲಾದವರು ಭಾಗಿಯಾಗಿದ್ದರು. 

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು