ಸುದ್ದಿಲೈವ್/ಶಿವಮೊಗ್ಗ
ಜಿಲ್ಲೆಯಾದ್ಯಂತ COTPA ವಿಶೇಷ ಕಾರ್ಯಾಚರಣೆ ಕೈಗೊಂಡು ಶಾಲಾ ಕಾಲೇಜು ಆವಾರಣದಲ್ಲಿ ಸಿಗರೇಟು ಮಾರಾಟ ಮಾಡುತ್ತಿದ್ದ ಅಂಗಡಿಗಳಮೇಲೆ ಜಿಲ್ಲಾ ಪೊಲೀಸರು ದಾಳಿ ನಡೆಸಿ ದೂರು ದಾಖಲಿಸಿಕೊಂಡಿದ್ದಾರೆ.
ಎಸ್ಪಿ ಮಿಥುನ್ ಕುಮಾರ್ ಜಿ ಕೆ, ಐ.ಪಿ.ಎಸ್, ಅಡಿಷನಲ್ ಎಸ್ಪಿಗಳಾದ ಅನಿಲ್ ಕುಮಾರ್ ಭೂಮಾರೆಡ್ಡಿ ಮತ್ತು ಕಾರಿಯಪ್ಪ ಎ.ಜಿ, ಮಾರ್ಗದರ್ಶದಲ್ಲಿ, ಆಯಾ ಪೊಲೀಸ್ ಉಪಾಧೀಕ್ಷಕರುಗಳ ಮೇಲ್ವಿಚಾರಣೆಯಲ್ಲಿ ಪೊಲೀಸ್ ನಿರೀಕ್ಷಕರು / ಪೊಲೀಸ್ ಉಪ ನಿರೀಕ್ಷಕರುಗಳು ಠಾಣಾ ವ್ಯಾಪ್ತಿಗಳಲ್ಲಿನ ಸಿಬ್ಬಂದಿಗಳು ಈ ದಾಳಿಯಲ್ಲಿ ಪಾಲ್ಗೊಂಡಿದ್ದರು.
ಶಾಲಾ ಕಾಲೇಜುಗಳ ಆವರಣದಿಂದ 100 ಗಜಗಳ ವ್ಯಾಪ್ತಿಯಲ್ಲಿ ಕಾನೂನು ಬಾಹೀರವಾಗಿ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುತ್ತಿದ್ದ ಪೆಟ್ಟಿ ಅಂಗಡಿ, ಜೆರಾಕ್ಸ್ ಅಂಗಡಿ ಮತ್ತು ಬೇಕರಿಗಳ ಮೇಲೆ ದಾಳಿ ನಡೆಸಲಾಗಿದೆ. ಶಿವಮೊಗ್ಗ – ಎ ಉಪ ವಿಭಾಗದಲ್ಲಿ - 210, ಶಿವಮೊಗ್ಗ – ಬಿ ಉಪ ವಿಭಾಗದಲ್ಲಿ - 75, ಭದ್ರಾವತಿ ಉಪ ವಿಭಾಗದಲ್ಲಿ - 94, ಸಾಗರ ಉಪ ವಿಭಾಗದಲ್ಲಿ – 11, ಶಿಕಾರಿಪುರ ಉಪ ವಿಭಾಗದಲ್ಲಿ – 71 ಮತ್ತು ತೀರ್ಥಹಳ್ಳಿ ಉಪ ವಿಭಾಗದಲ್ಲಿ - 51 ಸೇರಿ ಶಿವಮೊಗ್ಗ ಜಿಲ್ಲೆಯಾದ್ಯಂತ ಒಟ್ಟು 512 COTPA ಸ್ಥಳ ದಂಡ ಪ್ರಕರಣಗಳನ್ನು ಹಾಗೂ ಭದ್ರಾವತಿ ಉಪ ವಿಭಾಗದಲ್ಲಿ 3 ಮತ್ತು ತೀರ್ಥಹಳ್ಳಿ ಉಪ ವಿಭಾಗದಲ್ಲಿ 02 ಪ್ರಕರಣಗಳು ಸೇರಿ ಒಟ್ಟು 05 ಎಫ್.ಐ.ಆರ್ ಗಳನ್ನು COTPA ಕಾಯ್ದೆಯಡಿಯಲ್ಲಿ ದಾಖಲಿಸಲಾಗಿರುತ್ತದೆ.