ಕುಡಿಯುವ ನೀರು ವ್ಯತ್ಯಯ


ಸುದ್ದಿಲೈವ್/ಶಿವಮೊಗ್ಗ

ಕೃಷ್ಣ ರಾಜೇಂದ್ರ ಜಲಶುದ್ಧೀಕರಣ ಘಟಕಕ್ಕೆ ಮಹಾನಗರಪಾಲಿಕೆಯ ವತಿಯಿಂದ ಹೊಸದಾಗಿ ಭೂಗತ ಕೇಬಲ್ ಅಳವಡಿಸಿದ್ದು ನಗರದಲ್ಲಿ ಎರಡು ದಿನ ಕುಡಿಯುವ ನೀರಿನ ವ್ಯತ್ಯಯ ಉಂಟಾಗಲಿದೆ. 

ಅ.14 ರಂದು ಕೇಬಲ್  ಚಾಲನೆಗೊಳಿಸುವುದರಿಂದ ಅ.14 ಮತ್ತು 15 ರಂದು ಎರಡು ದಿನಗಳು ಶಿವಮೊಗ್ಗ ನಗರದಲ್ಲಿ ದೈನಂದಿನ ಕುಡಿಯುವ ನೀರಿನ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. 

ಸಾರ್ವಜನಿಕರು ಸಹಕರಿಸುವಂತೆ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಸಹಾಯಕ ಕಾರ್ಯಪಾಲಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Join Telegram Group
close